ಕೊಡಗು : ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ಮತ್ತು ಕಾರ್ಮಿಕ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಜಿಲ್ಲೆಯಲ್ಲಿ ಎಂದಿನಂತೆ ಅಂಗಡಿ-ಮುಂಗಟ್ಟುಗಳು ತೆರೆದಿದ್ದವು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳು ಸೇರಿ ಆಟೋ, ಟ್ಯಾಕ್ಸಿಗಳು ಎಂದಿನಂತೆ ಸಂಚರಿಸುತ್ತಿದ್ದವು. ಸೋಮವಾರಪೇಟೆ ತಾಲೂಕಿನ ಕುಶಾಲನಗರದ ಕೊಪ್ಪ ಗೇಟ್‌ಗೆ ಬೀಗ ಜಡಿದು ರಸ್ತೆತಡೆ ನಡೆಸಲು ಯತ್ನಿಸಿದ್ದು, ಪ್ರತಿಭಟನಾಕಾರರನ್ನು ಕುಶಾಲನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಡಿಕೇರಿಯಲ್ಲಿ ಕೂಡ ರಸ್ತೆ ತಡೆ ಮಾಡಲು ಪ್ರಯತ್ನಸಿದ ಕಾಂಗ್ರೆಸ್, ಜೆಡಿಎಸ್ಎಸ್ ಹಾಗೂ ಎಸ್‌ಡಿಪಿಐ ಕಾರ್ಯಕರ್ತರನ್ನು ಕೂಡ ಪೊಲೀಸರು ಬಂಧಿಸಿದರು. ಮಡಿಕೇರಿ, ಗೋಣಿಕೊಪ್ಪ ಕುಶಾಲನಗರ, ಸುಂಟಿಕೊಪ್ಪ, ಸೋಮವಾರಪೇಟೆ, ವಿರಾಜಪೇಟೆಯಲ್ಲಿ ಬಂದ್ ಬಿಸಿ ತಟ್ಟಲಿಲ್ಲ. ಮಡಿಕೇರಿ, ಕುಶಾಲನಗರ, ಹಾಸನ, ಮೈಸೂರು ಕಡೆಗೆ ಸಾರಿಗೆ ಬಸ್‌ಗಳು ಎಂದಿನಂತೆ ಸಂಚರಿಸಿದವು.