ETV Bharat / state

ಮಡಿಕೇರಿಯಲ್ಲಿ ಭೂ ಕಂಪನದ ಅನುಭವ: ಆತಂಕ ಬೇಡವೆಂದ ಜಿಲ್ಲಾಡಳಿತ

ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಗುಡುಗಿನ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಇದು ಸಣ್ಣ ಪ್ರಮಾಣದ ಕಂಪನವಾಗಿದ್ದು, ಸಾರ್ವಜನಿಕರು ಆತಂಕ ಪಡುವುದು ಬೇಡ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಮಡಿಕೇರಿ
author img

By

Published : May 25, 2019, 10:46 PM IST

ಮಡಿಕೇರಿ: ಮಹಾಮಳೆಗೆ ಕಂಗಾಲಾಗಿದ್ದ ಜನತೆಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಗುಡುಗಿನ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಅದು ಸಣ್ಣ ಪ್ರಮಾಣದ ಕಂಪನವೆಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಒಂದಕ್ಕಿಂತ ಕಡಿಮೆ ಪ್ರಮಾಣದ ತೀವ್ರತೆಯಿರುವ ಕಾರಣಕ್ಕೆ ಹಾರಂಗಿ ಜಲಾಶಯದ ಆವರಣದಲ್ಲಿ ಅಳವಡಿಸಿರುವ ರಿಕ್ಟರ್‌ ಮಾಪಕದಲ್ಲೂ ಯಾವುದೇ ಮಾಹಿತಿ ದಾಖಲಾಗಿಲ್ಲ. ಕಂಪನದ ಪ್ರಮಾಣವು 1ಕ್ಕಿಂತ ಕಡಿಮೆ ಇದ್ದಲ್ಲಿ ಯಾವುದೇ ಪ್ರಾಣ ಹಾನಿ ಹಾಗೂ ಆಸ್ತಿಪಾಸ್ತಿ ಹಾನಿ ಸಂಭವಿಸುವುದಿಲ್ಲ. ಕಂಪನದ ತೀವ್ರತೆಯು ಭಾರಿ ಕಡಿಮೆಯಿದ್ದು, ಸಾರ್ವಜನಿಕರು ಆತಂಕ ಪಡುವುದು ಬೇಡ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಮನವಿ ಮಾಡಿದ್ದಾರೆ.

ಈ ರೀತಿಯ ಕಂಪನದ ಅನುಭವ ಉಂಟಾದರೆ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಟೋಲ್‌ ಫ್ರೀ ದೂರವಾಣಿ: 08272 221077 ಕರೆ ಮಾಡಿ ಅಗತ್ಯ ನೆರವು ಪಡೆಯಬಹುದು. ಈ ರೀತಿಯ ಕಂಪನದ ಅನುಭವ ಸ್ಥಳಗಳ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರ, ಪೊಲೀಸ್‌ ಠಾಣೆ, ವಿದ್ಯುತ್‌ ಇಲಾಖೆ ಹಾಗೂ ಅಗ್ನಿ ಶಾಮಕ ಇಲಾಖೆಯನ್ನು ಸನ್ನದ್ಧವಾಗಿ ಇಡಲಾಗಿದೆ. ತುರ್ತು ಸಂದರ್ಭದಲ್ಲಿ ಅಗತ್ಯ ನೆರವು ನೀಡಬೇಕೆಂದು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

sample description

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.