ಕೊಡಗು: ನೀತಿ ಸಂಹಿತೆ ಜಾರಿಯಲ್ಲಿದ್ದರೂ ಪಕ್ಷದ ಚಿಹ್ನೆ ಬಳಸಿ ಶುಭಾಶಯ ಕೋರಿದ ಇಬ್ಬರು ಬಿಜೆಪಿ ಹಾಲಿ ಶಾಸಕರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ ಬೋಪಯ್ಯ ಮತ್ತು ಸೋಮವಾರ ಪೇಟೆ ಶಾಸಕ ಅಪ್ಪಚ್ಚು ರಂಜನ್ ಅವರಿಗೆ ನೋಟಿಸ್ ನೀಡಲಾಗಿದೆ. ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಜನ್ಮದಿನದ ಅಂಗವಾಗಿ ಮತ್ತು ಡಾ.ಕೇಶವ ಬಲಿರಾಮ್ ಹೆಡಗೇವಾರ್ ಜಯಂತಿ ಅಂಗವಾಗಿ ಬಿಜೆಪಿ ಪಕ್ಷದ ಚಿಹ್ನೆ ಬಳಸಿ ಶುಭಾಶಯ ಕೋರಿದ ಹಿನ್ನೆಲೆ ನೀತಿ ಸಂಹಿತೆ ಉಲಂಘನೆಯಾಗಿದೆ ಎಂದು ಚುನಾವಣಾ ಆಯೋಗ ನೋಟಿಸ್ ಜಾರಿಯಾಗಿದೆ.
ಬಿಜೆಪಿ ಪಕ್ಷದ ಚಿಹ್ನೆ ಬಳಸಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದ್ದ ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಅವರಿಗೆ ಚುನಾವಣಾ ಅಧಿಕಾರಿಗಳು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.
ಹತ್ತನೇ ತರಗತಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಕೆ.ಜಿ ಬೋಪಯ್ಯ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಪಕ್ಷದ ಚಿಹ್ನೆ ಬಳಸಿ ಮಕ್ಕಳಿಗೆ ಶುಭಾಶಯ ಕೋರಿದ್ದರು. ಚುನಾವಣಾ ಅಧಿಕಾರಿಗಳ ಒಪ್ಪಿಗೆ ಪಡೆಯದೆ ಸಾಮಾಜಿಕ ಜಾಲತಾಣದಲ್ಲಿ ಶಾಸಕರು ಪೋಸ್ಟ್ ಮಾಡಿದ್ದರು. ಈ ಬಗ್ಗೆ 24 ಗಂಟೆಯೊಳಗೆ ಉತ್ತರಿಸುವಂತೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ಇದನ್ನೂ ಓದಿ : ತಂದೆ ಸಿಎಂ ಆಗಬೇಕು, ವರುಣಾ ಕ್ಷೇತ್ರದಲ್ಲಿ ಗೆಲುವು ಖಚಿತ: ಯತೀಂದ್ರ ಸಿದ್ದರಾಮಯ್ಯ