ಕೊಡಗು: ಜಿಲ್ಲೆಯ ಗಡಿಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಕೊಡ್ಲಿಪೇಟೆ ಬಳಿಯ ಕಟ್ಟೆಪುರ ಗ್ರಾಮದಲ್ಲಿ ಕಾಡಾನೆಗಳ ಗುಂಪು ತೋಟಗಳಲ್ಲಿ ಓಡಾಡುತ್ತಿದ್ದು, ಜನ ಆತಂಕಗೊಂಡಿದ್ದಾರೆ.
9 ಆನೆಗಳ ಒಂದು ಗುಂಪು ಹಾಗೆಯೇ 7 ಆನೆಗಳ ಮತ್ತೊಂದು ಗುಂಪು ಜೊತೆಗೆ ಒಂಟಿ ಆನೆಯೊಂದು ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಸಮೀಪದ ಕಟ್ಟೆಪುರ ಗ್ರಾಮದ ಜನವಸತಿ ಪ್ರದೇಶಗಳಲ್ಲಿ ಓಡಾಡುತ್ತಿರುವುದನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
ಹೇಮಾವತಿ ಹಿನ್ನೀರು ಪ್ರದೇಶದ ಹಾಡ್ಲಿ ಅರಣ್ಯದಿಂದ ನಾಡಿಗೆ ಬಂದಿರುವ ಕಾಡಾನೆಗಳು ದಾಂಧಲೆ ನಡೆಸುತ್ತಿದ್ದು, ಇದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲದೆ ಕಾಡಾನೆಗಳನ್ನು ಕಾಡಿಗಟ್ಟುವಂತೆ ಕಟ್ಟೆಪುರ ಸುತ್ತಲ ಗ್ರಾಮದ ಜನತೆ ಒತ್ತಾಯಿಸಿದ್ದಾರೆ.