ETV Bharat / state

ಕೊಡಗು: ಬೀದಿಯಲ್ಲೇ ಬಡಿದಾಡಿಕೊಂಡ ಅಬಕಾರಿ ಪೊಲೀಸರು! - Inspection of illicit liquor sales

ಕೊಡಗು ಜಿಲ್ಲೆಯ ಸೋಮವಾರಪೇಟೆ ಅಬಕಾರಿ ಇನ್ಸ್‌ಪೆಕ್ಟರ್ ನಟರಾಜ್ ಮತ್ತು ಉಪ ಅಧೀಕ್ಷಕ ಶಿವಪ್ಪ ನಡು ಬೀದಿಯಲ್ಲೇ ಹೊಡೆದಾಡಿಕೊಂಡಿದ್ದಾರೆಎನ್ನಲಾಗಿದೆ .

Excavated policemen hitting the streets
ಬೀದಿಯಲ್ಲೇ ಬಡಿದಾಡಿಕೊಂಡ ಅಬಕಾರಿ ಪೊಲೀಸರು...!
author img

By

Published : Apr 15, 2020, 10:29 PM IST

ಕೊಡಗು: ಅಕ್ರಮ ಮದ್ಯ ಮಾರಾಟ ಪರಿಶೀಲನೆಗೆ ತೆರಳಿದ್ದ ಅಬಕಾರಿ ಪೊಲೀಸರು ನಡು ಬೀದಿಯಲ್ಲೇ ಅಶ್ಲೀಲ ಪದಗಳಿಂದ ಒಬ್ಬರನೊಬ್ಬರು ನಿಂದಿಸಿಕೊಂಡು ಬಡಿದಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

ಸೋಮವಾರಪೇಟೆ ಅಬಕಾರಿ ಇನ್ಸ್‌ಪೆಕ್ಟರ್ ನಟರಾಜ್ ಮತ್ತು ಉಪ ಅಧೀಕ್ಷಕ ಶಿವಪ್ಪ ನಡು ಬೀದಿಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಕೊರೊನಾ ವೈರಸ್ ಹರಡದಂತೆ ಲಾಕ್‍ಡೌನ್ ಆಗಿರುವುದರಿಂದ ಎಲ್ಲಿಯೂ ಮದ್ಯ ಸಿಗುತ್ತಿಲ್ಲ. ಹೀಗಾಗಿ ಗ್ರಾಮೀಣ ಭಾಗದ ಜನರು ಕಳ್ಳಭಟ್ಟಿ, ಅಕ್ರಮ ಮದ್ಯ ಮಾರಾಟಕ್ಕೆ ಮುಂದಾಗಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ.

ಹೀಗಾಗಿ ಉಪ ಅಧೀಕ್ಷಕ ಶಿವಪ್ಪ ಮತ್ತು ತಂಡ ಪರಿಶೀಲನೆಗೆ ಹೋಗಿತ್ತು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಅಬಕಾರಿ ಇನ್ಸ್‌ಪೆಕ್ಟರ್ ನಟರಾಜ್ ಏಕಾಏಕಿ ಹಲ್ಲೆ ನಡೆಸಿದ್ದು, ಬಳಿಕ ಇಬ್ಬರೂ ಕೈ ಕೈ ಮಿಲಾಯಿಸಿಕೊಂಡು ರಂಪ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.