ETV Bharat / state

ಕೊರೊನಾ ಪರಿಣಾಮ, ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆ: ಸಚಿವ ಸೋಮಶೇಖರ್​​​ - Kodagu lock down

ಎಲ್ಲ ರೈತರಿಗೂ ಸಂಪೂರ್ಣವಾಗಿ ಸಾಲ ಸಿಗಬೇಕು ಎಂಬ ದೃಷ್ಟಿಯಿಂದ ಮುಂದಿನ ವರ್ಷ 20 ಸಾವಿರ ಕೋಟಿ ರೂಪಾಯಿ ಸಾಲದ ವ್ಯವಸ್ಥೆ ಮಾಡಬೇಕಿದೆ. ಈ ಸಂಬಂಧ ಕೇಂದ್ರದ ಗಮನ ಸೆಳೆಯಲಾಗುವುದು ಎಂದ ಮುಖ್ಯಮಂತ್ರಿಗಳ ಬಳಿಯೂ ಮನವಿ ಮಾಡಿದ್ದೇವೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

Farmer Loan Repayment Period Extension: Minister Somashekhar
ಕೊರೊನಾ ಹಿನ್ನೆಲೆ ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆ: ಸಚಿವ ಸೋಮಶೇಖರ್​​​
author img

By

Published : Jul 2, 2020, 4:58 PM IST

ಮಡಿಕೇರಿ (ಕೊಡಗು): ಡಿಸೆಂಬರ್‌ವರೆಗೆ ಸಾಲ ಮರುಪಾವತಿಗೆ ಕಾಲಾವಕಾಶ ಕೊಡುವಂತೆ ಒತ್ತಾಯಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆಗೆ ಪತ್ರ ಬರೆದು ಮನವಿ ಮಾಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಕೊರೊನಾ ಹಿನ್ನೆಲೆಯಲ್ಲಿ ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆ: ಸಚಿವ ಸೋಮಶೇಖರ್​​​

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಹಕಾರ ಇಲಾಖೆ ವತಿಯಿಂದ ಕೊರೊನಾ ವಾರಿಯರ್ಸ್​ ಆಶಾ ಕಾರ್ಯಕರ್ತೆಯರಿಗೆ ತಲಾ 3,000 ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮಕ್ಕೆ ಚೆಕ್ ನೀಡುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಚಿವರು, ಕೋವಿಡ್ ಪರಿಸ್ಥಿತಿ ಇನ್ನೂ ಮುಂದುವರಿದಿರುವ ಕಾರಣ ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಸಬೇಕೆಂಬ ಬಗ್ಗೆ ರೈತರಿಂದ ಸಾಕಷ್ಟು ಮನವಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಸಿಎಂ ಜೊತೆಯೂ ಚರ್ಚಿಸಲಾಗಿದೆ ಎಂದು ಅವರು ತಿಳಿಸಿದರು.

ಕಳೆದ ವರ್ಷ ರೈತರಿಗೆ 13,500 ಕೋಟಿ ರೂಪಾಯಿ ಸಾಲ ಕೊಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ನಬಾರ್ಡ್‌ನಿಂದ ಹೆಚ್ಚುವರಿ ಒಂದು ಸಾವಿರ ಕೋಟಿ ರೂಪಾಯಿ ಲಭಿಸಿರುವುದರಿಂದ ಈ ಬಾರಿ 14,500 ಕೋಟಿ ರೂಪಾಯಿ ಸಾಲ ನೀಡಲು ಚಾಲನೆ ಕೊಟ್ಟಿದ್ದೇವೆ. ಎಲ್ಲ ರೈತರಿಗೂ ಸಂಪೂರ್ಣವಾಗಿ ಸಾಲ ಸಿಗಬೇಕು ಎಂಬ ದೃಷ್ಟಿಯಿಂದ ಮುಂದಿನ ಸಾಲಿನಲ್ಲಿ 20 ಸಾವಿರ ಕೋಟಿ ರೂಪಾಯಿ ಸಾಲದ ವ್ಯವಸ್ಥೆ ಮಾಡಬೇಕು. ಈ ಸಂಬಂಧ ಕೇಂದ್ರದ ಗಮನ ಸೆಳೆಯಬೇಕೆಂದು ಮುಖ್ಯಮಂತ್ರಿಗಳ ಬಳಿಯೂ ಮನವಿ ಮಾಡಿದ್ದೇವೆ ಎಂದರು.

ಆಶಾ ಕಾರ್ಯಕರ್ತೆಯರಿಗೆ ಶೀಘ್ರ ಸಾಲ:

ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ಭದ್ರತೆ ಕೊಡುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಚಿಂತನೆ ನಡೆಯುತ್ತಿದೆ. ಸ್ವಸಹಾಯ ಸಂಘ ಹಾಗೂ ಸ್ತ್ರೀಶಕ್ತಿ ಸಂಘಗಳ ಮಾದರಿ ಸಾಲ ನೀಡುವ ಸಂಬಂಧ ಈಗಾಗಲೇ ಸರ್ಕಾರದ ಮಟ್ಟದಲ್ಲಿ 2-3 ಸುತ್ತಿನ ಸಭೆಗಳು ನಡೆದಿದ್ದು, ಶೀಘ್ರದಲ್ಲಿಯೇ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.