ಕೊಡಗು: ಬಂಕ್‌ವೊಂದರಲ್ಲಿ ಪೆಟ್ರೋಲ್ ಸೋರಿಕೆಯಾದ ಪರಿಣಾಮ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಸೋಮವಾರಪೇಟೆ ಪಟ್ಟಣದಲ್ಲಿ ನಡೆದಿದೆ.
ಸೋಮವಾರಪೇಟೆ ಪಟ್ಟಣದ ಜಿ.ಡಿ.ನವೀನ್ ಎಂಬುವವರಿಗೆ ಸೇರಿದ ಪೆಟ್ರೋಲ್ ಬಂಕ್‌ನಲ್ಲಿ ಆಕಸ್ಮಿಕವಾಗಿ ಪೆಟ್ರೋಲ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿದೆ. ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ನಂತರ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.