ಕೊಡಗು: ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ನೆರೆ ಸಂತ್ರಸ್ತರು ಸಿದ್ಧಾಪುರ ಗ್ರಾಮ ಪಂಚಾಯತ್ ಎದುರು ಅಹೋರಾತ್ರಿ ಧರಣಿ ನಡೆಸಿದ್ದಾರೆ.
ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತ್ ಎದುರು ನೂರಾರು ಪ್ರತಿಭಟನಾಕಾರರು ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನೆರೆ ಹಾವಳಿ ಸಂಭವಿಸಿ 6 ತಿಂಗಳು ಕಳೆದಿದೆ. ಜಿಲ್ಲಾಡಳಿತ ಶಾಶ್ವತ ಪರಿಹಾರ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ಪ್ರತಿಭಟನಾ ಸ್ಥಳಕ್ಕೆ ಉಪವಿಭಾಗಾಧಿಕಾರಿ ಜವರೇಗೌಡ ಭೇಟಿ ನೀಡಿ, ನಿರಾಶ್ರಿತರ ಸಮಸ್ಯೆ ಆಲಿಸಿದ್ದಾರೆ. ಶೀಘ್ರವೇ ಸೂಕ್ತ ಕ್ರಮಕೈಗೊಳ್ಳುವಂತೆ ಸಂತ್ರಸ್ತರು ಒತ್ತಾಯಸಿದರು.