ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ತಿಂಗಳಿನಿಂದ ಹಸುಗಳ ಮೇಲೆ ದಾಳಿ ನಡೆಸಿ ಜನತೆಯಲ್ಲಿ ಆತಂಕ ಸೃಷ್ಟಿಸಿರುವ ಹುಲಿ ಚಿತ್ರ ಕೊನೆಗೂ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಗೋಣಿಕೊಪ್ಪ ವ್ಯಾಪ್ತಿಯ ಬೆಳ್ಳೂರು, ಹರಿಹರ, ಹುದಿಕೇರಿ ಮತ್ತು ನಾಲ್ಕೆರಿ ಗ್ರಾಮದಲ್ಲಿ ಹಸುಗಳನ್ನು ಕೊಂದಿದ್ದ ಹುಲಿಯ ಚಿತ್ರ ಅರಣ್ಯ ಇಲಾಖೆ ಅಳವಡಿಸಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹುಲಿಯನ್ನು ಅರವಳಿಕೆ ಚುಚ್ಚುಮದ್ದು ಮೂಲಕ ಹಿಡಿಯಲು ಅರಣ್ಯ ಇಲಾಖೆಯ ಅಧಿಕಾರಿಗಳು ಕಾಯುತ್ತಿದ್ದಾರೆ. ಆದಷ್ಟು ಬೇಗನೆ ಹುಲಿಗೆ ಅರವಳಿಕೆ ಚುಚ್ಚು ಮದ್ದು ನೀಡಿ ಹಿಡಿಯಲಾಗುತ್ತದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಒಂದು ತಿಂಗಳಿನಿಂದ ಕೊಡಗಿನಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ಹುಲಿ, ದಕ್ಷಿಣ ಕೊಡಗಿನ ವಿರಾಜಪೇಟೆ ವ್ಯಾಪ್ತಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಹಸುಗಳನ್ನು ಬಲಿ ಪಡೆದಿತ್ತು. ಹುಲಿಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರು.