ಕೊಡಗು: ಕಾಫಿ ತೋಟವೊಂದರಿಂದ ಮತ್ತೊಂದು ಕಾಫಿ ತೋಟಕ್ಕೆ ಕಾಡಾನೆಗಳ ಹಿಂಡು ರಸ್ತೆ ಮಧ್ಯೆ ಹಾಯ್ದು ಹೋಗಿರುವ ಘಟನೆ ವಿರಾಜಪೇಟೆ ತಾಲೂಕಿನ ನೂಕ್ಯ ಗ್ರಾಮದಲ್ಲಿ ಕಂಡು ಬಂದಿದೆ.
ದಕ್ಷಿಣ ಕೊಡಗಿನ ಕೆಲವು ಭಾಗಗಳಲ್ಲಿ ಕಾಡಾನೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು,ಸುಮಾರು 13 ಕಾಡಾನೆಗಳು ರಸ್ತೆ ದಾಟುತ್ತಿರುವುದನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.
ಇನ್ನು, ಕಾಡಾನೆಗಳು ರಾಜಾರೋಷವಾಗಿ ನಾಡಿಗೆ ಬರುತ್ತಿದ್ದು,ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.