ಸೋಮವಾರಪೇಟೆ (ಕೊಡಗು): ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪೂರ್ತಿ ಮೆಂಟಲ್ ಆಗಿ ಬಿಟ್ಟಿದ್ದಾರೆ. ಅವರಿಗೆ ಇರುವ ಹುದ್ದೆಯನ್ನು ಉಳಿಸಿಕೊಳ್ಳುವುದೇ ದೊಡ್ಡ ಕಷ್ಟವಾಗಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದಾರೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ಮುಖ್ಯಮಂತ್ರಿ ಸ್ಥಾನದ ಬದಲಾವಣೆಯ ಪ್ರಶ್ನೆಯೇ ಇಲ್ಲ. ಈಗಂತೂ ಮುಖ್ಯಮಂತ್ರಿ ಹುದ್ದೆ ಖಾಲಿಯೂ ಇಲ್ಲ. ಸಿಎಂ ಬದಲಾವಣೆ ಎನ್ನುವುದು ಪಕ್ಷದ ಆಂತರಿಕ ಚರ್ಚೆ ಅಲ್ಲ. ಮುಂದೆಯೂ ಯಡಿಯೂರಪ್ಪ ಅವರೇ ಸಿಎಂ ಆಗಿರುತ್ತಾರೆ ಎಂದರು.
ಸಿದ್ದರಾಮಯ್ಯ ಅವರನ್ನು ನೋಡಿದರೆ ಅಯ್ಯೋ ಪಾಪ ಎನಿಸುತ್ತಿದೆ. ಅವರ ಹುದ್ದೆಯನ್ನು ಅವರು ಉಳಿಸಿಕೊಳ್ಳುವುದೆ ಕಷ್ಟವಾಗಿದೆ ಎಂದು ಸಿದ್ದರಾಮಯ್ಯ ಸಿಎಂ ಸ್ಥಾನ ಬದಲಾವಣೆಗೆ ಆಗಲಿದೆ ಎನ್ನುವ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.