ಕೊಡಗು: ಆರ್‌ಸಿಇಪಿ ಮತ್ತು ಇತರ ಎಲ್ಲಾ ಮುಕ್ತ ಒಪ್ಪಂದಗಳಿಂದ ಕೃಷಿ ಸಂಬಂಧಿತ ವಲಯಗಳನ್ನು ಹೊರಗಿಡುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೊಡಗು ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಭವನದ ಮುಂಭಾಗ ಜಮಾಯಿಸಿದ ರೈತರು, ಈ ಒಪ್ಪಂದವನ್ನು ಕೇಂದ್ರ ಸರ್ಕಾರ ಪುನರ್ ಪರಿಶೀಲಿಸಬೇಕೆಂದು ಆಗ್ರಹಿಸಿದರು. ಒಪ್ಪಂದಂತೆ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಉತ್ಪನ್ನಗಳನ್ನು ತೆರಿಗೆ ಇಲ್ಲದೆ ಕಡಿಮೆ ಬೆಲೆಗೆ ಭಾರತಕ್ಕೆ ತರುವುದರಿಂದ ಇಲ್ಲಿನ ಕೃಷಿ, ತೋಟಗಾರಿಕೆ, ಹೈನುಗಾರಿಕೆಗೆ ಭಾರೀ ನಷ್ಟವಾಗಿ ಉದ್ಯೋಗ ಕಡಿತವಾಗುತ್ತದೆ. ಆದ್ದರಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಆರ್‌ಸಿಇಪಿ ಒಪ್ಪಂದವನ್ನ ಕೈ ಬಿಡಬೇಕೆಂದು ಒತ್ತಾಯಿಸಿ, ಕೊಡಗು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
ಒಪ್ಪಂದದಿಂದ ಭಾರತ ಹಿಂದೆ ಸರಿಯದಿದ್ದಲ್ಲಿ, ದೇಶಾದ್ಯಂತ ರೈತರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಮತ್ತು ಭಾರತ ಬಂದ್‌ಗೂ ಕರೆ ನೀಡಬೇಕಾಗುತ್ತದೆ ಎಂದು ರೈತ ಮುಖಂಡರು ಎಚ್ವರಿಕೆ ನೀಡಿದ್ದಾರೆ.