ETV Bharat / state

ಕೊಡಗು: ಸರ್ಕಾರದ ಆದೇಶ ಧಿಕ್ಕರಿಸಿ ಅದ್ಧೂರಿಯಾಗಿ ಮಗಳ ಮದುವೆ ಮಾಡಿದ ಅಧಿಕಾರಿ! - corona

ಸೋಮವಾರಪೇಟೆ ಸರ್ವೆ ಅಧಿಕಾರಿ ಹರಿಶ್ಚಂದ್ರ ಎಂಬುವರು ಸರ್ಕಾರದ ಆದೇಶವನ್ನ ಗಾಳಿಗೆ ತೂರಿ ಅದ್ಧೂರಿಯಾಗಿ ತಮ್ಮ ಮಗಳ ಮದುವೆ ಮಾಡಿದ್ದಾರೆ.

Grand marrige
ಮದುವೆ
author img

By

Published : Mar 20, 2020, 5:17 PM IST

ಕೊಡಗು/ಸೋಮವಾರಪೇಟೆ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಾಮೂಹಿಕ ಕಾರ್ಯಕ್ರಮಗಳನ್ನು ಮುಂದೂಡುವಂತೆ ಆದೇಶ ನೀಡಿದ್ದರೂ ಸರ್ಕಾರಿ ಅಧಿಕಾರಿಯೊಬ್ಬರು ಅದ್ಧೂರಿಯಾಗಿ ಮಗಳ ಮದುವೆ ಮಾಡಿರುವ ಘಟನೆ ಸೋಮವಾರಪೇಟೆ ತಾಲೂಕಿನಲ್ಲಿ ನಡೆದಿದೆ.

ಸರ್ಕಾರದ ಆದೇಶ ಧಿಕ್ಕರಿಸಿ ಅದ್ಧೂರಿಯಾಗಿ ಮಗಳ ಮದುವೆ ಮಾಡಿದ ಅಧಿಕಾರಿ

ಸೋಮವಾರಪೇಟೆ ಸರ್ವೆ ಅಧಿಕಾರಿ ಹರಿಶ್ಚಂದ್ರ ಎಂಬುವರು ಕುಶಾಲನಗರದ ರೈತ ಭವನದಲ್ಲಿ ನೂರಾರು ಜನರನ್ನು ಸೇರಿಸಿ ಅದ್ಧೂರಿಯಾಗಿ ಮಗಳ ಮದುವೆ ಮಾಡಿದ್ದಾರೆ. ಕೊರೊನಾ ಸೋಂಕು ಹರಡದಂತೆ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಗಳನ್ನು ಪಾಲಿಸಿ ಜನತೆಗೆ ತಿಳಿಹೇಳಬೇಕಾದ ಅಧಿಕಾರಿಯೇ ಹೀಗೆ ಮಾಡಿದರೆ ಹೇಗೆ ಎಂದು ಸಾರ್ವಜನಿಕ ವಲಯದಲ್ಲಿ ಟೀಕೆಗಳು ವ್ಯಕ್ತವಾಗಿವೆ.

ಸ್ವತಃ ಜಿಲ್ಲಾಧಿಕಾರಿಯೇ ಮನವಿ ಮಾಡಿದ್ದರೂ ಅಧಿಕಾರಿ ಅದ್ಧೂರಿಯಾಗಿ ಮದುವೆ ಮಾಡಿರುವ ಬಗ್ಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.