ETV Bharat / state

ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರಾಗಿದ್ದಕ್ಕೆ ಕಾರಣ ಕೊಟ್ರು ಶ್ರೀರಾಮುಲು - ministers news bytes

ಮಗಳ ಮದುವೆ ಕಾರ್ಯಕ್ರಮದ ತಯಾರಿಯಲ್ಲಿದ್ದೇನೆ. ಸಂಪುಟ ವಿಸ್ತರಣೆಯನ್ನು ನಮ್ಮ ನಾಯಕರು ಸಮರ್ಥವಾಗಿ ಮಾಡಿದ್ದಾರೆ ಎಂದಿರುವ ಆರೋಗ್ಯ ಸಚಿವ ಶ್ರೀರಾಮುಲು ಅವರು, ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರಾಗಿರುವುದಕ್ಕೆ ಕಾರಣ ತಿಳಿಸಿದ್ದಾರೆ.

health-minister-sriramulu
health-minister-sriramulu
author img

By

Published : Feb 6, 2020, 3:49 PM IST

ಮಡಿಕೇರಿ: ಮಗಳ ಮದುವೆ ಕಾರ್ಯಕ್ರಮದ ತಯಾರಿಯಲ್ಲಿರುವುದರಿಂದ ಇಂದು ನಡೆದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ತೆರಳು ಸಾಧ್ಯವಾಗಿಲ್ಲ ಎಂದು ತಮ್ಮ ಗೈರುಹಾಜರಿಗೆ ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

ಸಂಪುಟ ವಿಸ್ತರಣೆ ಗೈರಾಗಿದ್ದಕ್ಕೆ ಕಾರಣ ಕೊಟ್ಟ ಸಚಿವ ಶ್ರೀರಾಮುಲು

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ನಮಗೆ ಯಾವುದೇ ಅಸಮಾಧಾನವಿಲ್ಲ. ನಮ್ಮಲ್ಲಿ ಮೂಲ ಬಿಜೆಪಿಗರು ಮತ್ತು ವಲಸಿಗರು ಎನ್ನುವ ವ್ಯತ್ಯಾಸವಿಲ್ಲ. ಸರ್ಕಾರ ರಚನೆಗೂ ಮೊದಲೇ ಬೇರೆ ಪಕ್ಷಗಳಿಂದ ಶಾಸಕರು ಬರುವಾಗ ಅವರಿಗೆ ಸಚಿವಸ್ಥಾನ ನೀಡುವ ಭರವಸೆ ನೀಡಲಾಗಿತ್ತು. ಅದರಂತೆ ಈಗ ಸಚಿವ ಸಂಪುಟ ವಿಸ್ತರಣೆ ಆಗಿದೆ ಎಂದರು. ಇದೇ ವೇಳೆ ಉಪಮುಖ್ಯಮಂತ್ರಿ ಸ್ಥಾನ ಸಿಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಶ್ರೀರಾಮುಲು ಪಕ್ಷ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ಆತಂಕ ಮೂಡಿಸುತ್ತಿದೆ. ಏರ್​ಪೋರ್ಟ್ ಮತ್ತು ರೈಲು ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ 74 ಜನರ ರಕ್ತ ಮಾದರಿ ಸಂಗ್ರಹಿಸಿ ಪರೀಕ್ಷಿಸಲಾಗಿದೆ. ಎಲ್ಲವೂ ನೆಗೆಟಿವ್ ಬಂದಿದ್ದು, ಆತಂಕ ಬೇಡ. ಈಗಾಗಲೇ ಎಲ್ಇಡಿ ಮೊಬೈಲ್​​ ಲ್ಯಾಬ್ ಆರಂಭಿಸಲಾಗಿದೆ ಎಂದು ಆರೊಗ್ಯ ಸಚಿವರು ಮಾಹಿತಿ ನೀಡಿದರು.

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಿಸಲಾಗಿದೆ‌. ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಇದೇ ವೇಳೆ ಹೇಳಿದ್ರು.

Intro:ಮಗಳ ಮದುವೆ ತಯಾರಿ ಹಿನ್ನಲೆ ಸಂಪುಟ ವಿಸ್ತರಣೆಗೆ ಹೋಗಿಲ್ಲ: ಆರೋಗ್ಯ ಸಚಿವ ಶ್ರೀರಾಮುಲು

ಕೊಡಗು: ಮಗಳ ಮದುವೆ ಕಾರ್ಯಕ್ರಮದ
ತಯಾರಿಯಲ್ಲಿ ನಾನು ಇದ್ದೇನೆ.ಸಂಪುಟ ವಿಸ್ತರಣೆಯನ್ನು ನಮ್ಮ ನಾಯಕರು ಸಮರ್ಥವಾಗಿ ಮಾಡುತ್ತಾರೆ ಎಂದು
ಸಂಪುಟ ವಿಸ್ತರಣೆ ಗೈರಾಗಿರುವುದಕ್ಕೆ ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಸಚಿವ ಸಂಪುಟ ವಿಸ್ತರಣೆ ಕುರಿತು ನಮಗೆ ಯಾವುದೇ ಅಸಮಾಧಾನವಿಲ್ಲ. ಮೂಲ ಬಿಜೆಪಿಗರು ವಲಸಿಗರು ಎನ್ನುವ ವ್ಯತ್ಯಾಸವಿಲ್ಲ. ಸರ್ಕಾರ ರಚನೆಗೂ ಮೊದಲೇ ಬೇರೆ ಪಕ್ಷಗಳಿಂದ ಶಾಸಕರು ಬರುವಾಗ ಅವರಿಗೆ ಸಚಿವಸ್ಥಾನ ನೀಡುವ ಭರವಸೆ ನೀಡಲಾಗಿತ್ತು ಎಂದು ಉಪಮುಖ್ಯಮಂತ್ರಿ ಸ್ಥಾನ ಸಿಗದ ವಿಚಾರಕ್ಕೆ ಪಕ್ಷ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

ಇನ್ನೂ ರಾಜ್ಯದಲ್ಲಿ ಕೊರೊನಾ ವೈರಸ್ ದೇಶದಲ್ಲಿ ಆತಂಕ ಮೂಡಿಸುತ್ತಿದೆ.ಏರ್ ಪೋರ್ಟ್ ಮತ್ತು ರೈಲ್ವೇ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ 74 ಜನರ ರಕ್ತ ಮಾದರಿ ಸಂಗ್ರಹಿಸಿ ಪರೀಕ್ಷಿಸಲಾಗಿದೆ. ಎಲ್ಲವೂ ನೆಗೆಟಿವ್ ಆಗಿ ಬಂದಿದೆ ಆದ್ದರಿಂದ ಆತಂಕ ಬೇಡ.ಈಗಾಗಲೇ ಎಲ್ಇಡಿ ಮೊಬೈಲ್ ನ
ಲ್ಯಾಬ್ ಆರಂಭಿಸಲಾಗಿದೆ.ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ಹಿನ್ನೆಲೆಯಲ್ಲಿ
ರಾಜ್ಯದಲ್ಲಿ ಮಾಹಿತಿ ಸಂಗ್ರಹಿಸಲಾಗಿದೆ‌. ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು

Body:0

Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.