ಕೊಡಗು: ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ, ಆಗಸ್ಟ್ 6 ರಂದು ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಹಾಗೂ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಕೇಂದ್ರ ಹವಾಮಾನ ಇಲಾಖೆ ಕೊಡಗಿನಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಆಗಸ್ಟ್ 10 ರವರೆಗೆ ಆರೆಂಜ್ ಹಾಗೂ ರೆಡ್ ಅಲರ್ಟ್ ಕೂಡ ಘೋಷಿಸಿದೆ.
ಹಾಗೆಯೇ ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಮುಂಜಾಗ್ರತಾ ದೃಷ್ಟಿಯಿಂದ ನಾಳೆ ರಜೆ ನೀಡಿ ಮೌಖಿಕ ಆದೇಶ ಘೋಷಿಸಿದೆ.
ಈಗಾಗಲೇ ವಿರಾಜಪೇಟೆ, ನಾಪೋಕ್ಲು, ತಲಕಾವೇರಿ, ಭಾಗಮಂಡಲ ಸೇರಿದಂತೆ ಬ್ರಹ್ಮಗಿರಿ ಪರ್ವತ ಶ್ರೇಣಿಯಲ್ಲೂ ವಿಪರೀತ ಮಳೆಯಾಗುತ್ತಿದೆ. ಅಲ್ಲದೆ ತ್ರಿವೇಣಿ ಸಂಗಮ ಮತ್ತು ನದಿ ಪಾತ್ರಗಳಲ್ಲೂ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಹಲವೆಡೆ ಭೂ ಕುಸಿತ, ರಾಜ್ಯ ಹೆದ್ದಾರಿಗಳು ಕುಸಿದು ಮಳೆ ಅವಾಂತರ ಸೃಷ್ಟಿಸಿದೆ.