ETV Bharat / state

ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ: ಹಲವೆಡೆ ಶಾಲೆ, ಕಾಲೇಜಿಗೆ ರಜೆ ಘೋಷಣೆ - ಕರ್ನಾಟಕ ಮಳೆ ಮಾಹಿತಿ

ಶಿವಮೊಗ್ಗ ಜಿಲ್ಲೆಯಲ್ಲಿಯೂ ವರುಣನ ಆರ್ಭಟ ಜೋರಾಗಿದ್ದು, ಮಲೆನಾಡು ಭಾಗದ ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.

heavy-rain-in-many-parts-of-coastal-and-malnad-districts
ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ: ಹಲವೆಡೆ ಶಾಲೆ, ಕಾಲೇಜಿಗೆ ರಜೆ ಘೋಷಣೆ
author img

By

Published : Jul 6, 2022, 7:45 AM IST

ಕೊಡಗು/ಉತ್ತರಕನ್ನಡ/ದ.ಕನ್ನಡ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ನೀಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಕೂಡ ಮಳೆ ಹಿನ್ನೆಲೆಯಲ್ಲಿ 6 ತಾಲೂಕುಗಳಲ್ಲಿ ನಾಲ್ಕು ದಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಎನ್​​.​ಆರ್​.ಪುರ, ಕೊಪ್ಪ, ಶೃಂಗೇರಿ ತಾಲೂಕುಗಳಲ್ಲಿ ಇಂದಿನಿಂದ 9ರವರೆಗೆ ರಜೆ ಘೋಷಣೆ ಮಾಡಲಾಗಿದೆ.

ಕರಾವಳಿಯಲ್ಲಿ ಆರೆಂಜ್​ ಅಲರ್ಟ್​: ಉಡುಪಿಯಲ್ಲೂ ವರುಣನ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಕೂರ್ಮರಾವ್ ಆದೇಶಿಸಿದ್ದಾರೆ. ಭಾರಿ ಮಳೆ ಸಾಧ್ಯತೆ ಇದ್ದು ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್​ ಅಲರ್ಟ್​ ನೀಡಿದೆ. ಹಾಗೆಯೇ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಆರೆಂಜ್​ ಅಲರ್ಟ್ ಘೋಷಿಸಲಾಗಿದೆ. ಶಾಲಾ, ಕಾಲೇಜುಗಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ತಿಳಿಸಿದ್ದಾರೆ.

ಉತ್ತರಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಂದೂ ಕೂಡ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್​ ತಿಳಿಸಿದ್ದಾರೆ.

heavy-rain-in-many-parts-of-coastal-and-malnad-districts
ಕೊಡಗಿನಲ್ಲಿ ಗುಡ್ಡ ಕುಸಿತ

ಕೊಡಗು ಜಿಲ್ಲೆಯಲ್ಲಿಯೂ ಮಳೆ ಕಾರಣಕ್ಕೆ ಎಲ್ಲ ಶಾಲಾ, ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ್​ ಆದೇಶಿಸಿದ್ದಾರೆ. ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮೊಣ್ಣಂಗೇರಿ ಭಾಗದಲ್ಲಿ ಗುಡ್ಡ ಕುಸಿತದಿಂದ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಗಾಳಿಬೀಡು ಭಾಗದಲ್ಲಿ 125 ಮಿ.ಮೀ ದಾಖಲೆಯ ಮಳೆಯಾಗಿದ್ದು, 2018ರಲ್ಲಿ ಈ ಭಾಗದಲ್ಲಿ ಸಂಭವಿಸಿದ ಜಲಪ್ರಳಯದಿಂದ ಹೆಚ್ಚು ಹಾನಿಯಾಗಿತ್ತು.

ಶಿವಮೊಗ್ಗ ಜಿಲ್ಲೆಯಲ್ಲಿಯೂ ವರುಣ ಆರ್ಭಟ ಜೋರಾಗಿದ್ದು, ಮಲೆನಾಡು ಭಾಗದ ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.

ಇದನ್ನೂ ಓದಿ: ಜಮ್ಮು- ಕಾಶ್ಮೀರದ ಗಂದೇರ್‌ಬಾಲ್​ನಲ್ಲಿ ಹಠಾತ್ ಪ್ರವಾಹ : ಶ್ರೀನಗರ-ಲೇಹ್ ಹೆದ್ದಾರಿ ಸಂಚಾರ ಬಂದ್

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.