ETV Bharat / state

ಕೊಡಗಿನಲ್ಲಿ ವರುಣಾರ್ಭಟ: ಕೊಚ್ಚಿ ಹೋದ ಜೀಪು, ಧರೆಗುರುಳಿದ ಮರ, ವಿದ್ಯುತ್ ಕಂಬಗಳು - ಮತ್ತೆ ಆರೆಂಜ್ ಅಲರ್ಟ್ - ಕೊಡಗು

ಕೊಡಗಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಶನಿವಾರ ಸಂಜೆವರೆಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

Kodagu
ಕೊಡಗಿನಲ್ಲಿ ವರುಣಾರ್ಭಟ..
author img

By

Published : Jun 19, 2021, 11:17 AM IST

ಕೊಡಗು: ಜಿಲ್ಲೆಯಲ್ಲಿ ಕಳೆದ ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಅಲಲ್ಲಿ ಮರಗಳು ನೆಲಕ್ಕೆ ಉರುಳುತ್ತಿದೆ. ಕಾವೇರಿ ನೀರಿನ ಮಟ್ಟ ಏರಿಕೆಯಾಗಿದೆ.

ಮಳೆಯ ರಭಸಕ್ಕೆ ಜನರಲ್ಲಿ ಆತಂಕ ಶುರುವಾಗಿದ್ದು, ಜಿಲ್ಲೆಯಲ್ಲಿ ಮತ್ತೊಂದು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೊಡಗಿನಲ್ಲಿ ವರುಣಾರ್ಭಟ

ಶನಿವಾರ ಸಂಜೆವರೆಗೂ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ 115.6 ಮಿಲಿ ಮೀಟರ್​ನಿಂದ 204 ಮಿಲಿ ಮೀಟರ್ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ. ತಲಕಾವೇರಿ, ಭಾಗಮಂಡಲದಲ್ಲಿ ಮಳೆ ಹೆಚ್ಚಾಗಿದ್ದು, ತ್ರಿವೇಣಿ ಸಂಗಮದಲ್ಲಿ ನೀರು ಹೆಚ್ಚಾಗಿ ರಸ್ತೆಯ ಮಟ್ಟಕ್ಕೆ ಹರಿಯುತ್ತಿದೆ.

ನಾಪೋಕ್ಲು ಬಲಮುರಿನಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಅಲ್ಲದೆ ಮಳೆಯ ಆರ್ಭಟಕ್ಕೆ ಅಲಲ್ಲಿ ಅವಾಂತರ ಸೃಷ್ಟಿಯಾಗಿದೆ. ದೊಡ್ಡ ದೊಡ್ಡ ಮರಗಳು ನೆಲಕ್ಕುರುಳುತ್ತಿದ್ದು, ರಸ್ತೆ ಸಂಚಾರ ಅಸ್ತವ್ಯಸ್ತವಾಗುತ್ತಿದೆ. ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದಲ್ಲಿ ಮಳೆ, ಗಾಳಿಯಿಂದ ವಾಸದ ಮನೆಗೆ ಹಾನಿಯಾಗಿದೆ. ಕೆಲವು ಕಡೆ ರಸ್ತೆ ಬಿರುಕು ಬಿಟ್ಟಿದ್ದು, ಟಾರ್ಪಲ್ ಹೊದಿಸಲಾಗಿದೆ.

ನದಿಗೆ ಉರುಳಿದ ಜೀಪ್​​:

ವಿರಾಜಪೇಟೆ ತಾಲೂಕಿನ ಹುದಿಕೇರಿ ಬಳಿ ಸೇತುವೆ ಬಳಿ ಜೀಪ್​ವೊಂದು ನದಿಗೆ ಉರುಳಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಜೀಪು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ. ಮಳೆ ಹೆಚ್ಚಾದ ಕಾರಣ ನೀರಿನಲ್ಲಿ ಕೊಚ್ಚಿ ಹೋಗುತ್ತಿ ಜೀಪ್​​ಅನ್ನು ಸ್ಥಳೀಯರು ಬೇರೆ ವಾಹನದ ಸಹಾಯದಿಂದ ಮೇಲಕ್ಕೆ ಎತ್ತಿದಿದ್ದಾರೆ.

ಎನ್​​ಡಿಆರ್​​ಎಫ್ ತಂಡ ನಿಯೋಜನೆ:

ಸದ್ಯ ಅಪಾಯ ಸ್ಥಳಗಳನ್ನು ಗುರುತು ಮಾಡಿ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ನೋಟಿಸ್ ನೀಡಲಾಗಿದೆ. ಇನ್ನು ಜಿಲ್ಲೆಯಲ್ಲಿ ಅನಾಹುತಗಳು ಸಂಭವಿಸಿದರೆ ಜನರ ರಕ್ಷಣೆಗಾಗಿ ಎನ್​​ಡಿಆರ್​​ಎಫ್ ತಂಡವನ್ನು ನಿಯೋಜನೆ ಮಾಡಲಾಗಿದೆ.

ಓದಿ: ಮಹಾರಾಷ್ಟ್ರದಲ್ಲಿ ಮುಂದುವರೆದ ಮಳೆ ಅಬ್ಬರ: ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.