ಮಡಿಕೇರಿ(ಕೊಡಗು): ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆ ಇಂದು ಮತ್ತೆ ತೀವ್ರಗೊಂಡಿದೆ. ಭಾಗಮಂಡಲ, ತಲಕಾವೇರಿ, ನಾಪೋಕ್ಲು ಮತ್ತು ಮಡಿಕೇರಿ ಸೇರಿದಂತೆ ಹಲವೆಡೆ ಮಳೆ ಅಬ್ಬರಿಸುತ್ತಿದೆ.
ಇಂದು ಬೆಳಗ್ಗೆಯಿಂದಲೂ ಬಿಟ್ಟು ಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ನಾಲ್ಕು ದಿನಗಳಿಂದ ಆಗೊಮ್ಮೆ ಈಗೊಮ್ಮೆ ಸುರಿಯುತ್ತಿದ್ದ ಮಳೆ ಇಂದು ರಭಸವಾಗಿ ಗಂಟೆಗಟ್ಟಲೇ ಸುರಿಯುತ್ತಿದೆ.
ಒಂದು ವೇಳೆ ಮಳೆ ಹೀಗೆ ತೀವ್ರಗೊಂಡಲ್ಲಿ ಮತ್ತೆ ಅನಾಹುತಗಳು ಸಂಭವಿಸುತ್ತವೆ ಎಂಬ ಭೀತಿಯಲ್ಲಿ ಜಿಲ್ಲೆಯ ಜನತೆಯಿದ್ದಾರೆ.