ಕೊಡಗು: ಕಳೆದ ಮೂರ್ನಾಲ್ಕು ವರ್ಷದಿಂದ ಜಿಲ್ಲೆಯಲ್ಲಿ ಉಂಟಾಗುತ್ತಿರುವ ಪ್ರಕೃತಿ ವಿಕೋಪದಿಂದಾಗಿ ಜನತೆ ಭಯದ ವಾತಾವರಣದಲ್ಲೇ ಮಳೆಗಾಲ ಕಳೆಯುವಂತಾಗಿದೆ.
ಮಳೆಗಾಲದಲ್ಲಿ ಸಾಕಷ್ಟು ಅನಾಹುತಗಳು ಸಂಭವಿಸುವುದರಿಂದ ಜಿಲ್ಲೆಯ 47 ಪ್ರದೇಶಗಳಲ್ಲಿ ಪ್ರವಾಹ ಸಂಭವಿಸಬಹುದಾದ ಸೂಕ್ಷ್ಮ ಪ್ರದೇಶಗಳು ಎಂದು ಜಿಲ್ಲಾಡಳಿತ ಗುರುತಿಸಿದೆ. ಇದಲ್ಲದೆ ಮೂರು ತಾಲ್ಲೂಕುಗಳ 85 ಪ್ರದೇಶಗಳಲ್ಲಿ ಭೂಕುಸಿತ ಆಗುವ ಸಾಧ್ಯತೆಯೂ ಇದೆ ಎನ್ನುವ ಮಾಹಿತಿ ಇದೆ. ಇದಕ್ಕಾಗಿ ಜಿಲ್ಲೆಯ 77 ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ಸ್ಥಾಪನೆ ಮಾಡಲು ಯೋಜನೆ ರೂಪಿಸಲಾಗಿದೆ.
ಇದರ ಜೊತೆಗೆ ಸೂಕ್ಷ್ಮ ಪ್ರದೇಶಗಳಲ್ಲಿ ವಾಸವಿರುವ ಎರಡು ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಲಾಗಿದೆ.