ETV Bharat / state

ಕೊಡಗಿನಲ್ಲಿ ಮುಂಗಾರು ಆರಂಭ: ಜೂನ್ 23 ರಿಂದ ಆಗಸ್ಟ್ 16 ವರೆಗೆ ಭಾರಿ ವಾಹನ ಸಂಚಾರಕ್ಕೆ ನಿಷೇಧ - Heavy vehicle prohibited in kodagu

ಸಾರ್ವಜನಿಕರ ಸುರಕ್ಷತೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಣೆ ಮತ್ತು ಇತರ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಬಂಧಿಸುವ ಬಗ್ಗೆ ತೀರ್ಮಾನಿಸಲಾಗಿದೆ.

Heavy rain in kodagu
ಕೊಡಗಿನಲ್ಲಿ ಧಾರಕಾರ ಮಳೆ
author img

By

Published : Jun 16, 2021, 10:59 PM IST

ಕೊಡಗು: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಜೂನ್ 23 ರಿಂದ ಆಗಸ್ಟ್ 16 ವರೆಗೆ ಭಾರಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಮಳೆಗಾಲ ಆರಂಭವಾಗಿದೆ. ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಣೆ ಮತ್ತು ಇತರ ಸರಕು ಸಾಗಾಣಿಕೆಯನ್ನು ಜಿಲ್ಲಾದ್ಯಂತ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಬಂಧಿಸುವ ಬಗ್ಗೆ ತೀರ್ಮಾನಿಸಲಾಗಿದೆ.

ಕೊಡಗಿನಲ್ಲಿ ಧಾರಾಕಾರ ಮಳೆ

ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆ. ಹಾಗೆಯೇ ಅಧಿಕ ಭಾರ ತುಂಬಿದ ಭಾರಿ ಸರಕು ಸಾಗಾಣೆ ವಾಹನಗಳು ನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಭೂಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತದೆ.

ಈ ಹಿನ್ನೆಲೆ ಸಾರ್ವಜನಿಕ ಜೀವ ಮತ್ತು ಆಸ್ತಿಗಳ ಹಿತದೃಷ್ಟಿಯಿಂದ ವಾಹನದ ನೋಂದಣಿ ತೂಕ 16,200 ಕೆಜಿಗಿಂತ ಹೆಚ್ಚಿನ ತೂಕದ ಸರಕು ಸಾಗಣೆ ವಾಹನ/ ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರಿ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ಮತ್ತು ಮರಳು ಸಾಗಣೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಬಂಧಿಸಲು ಸಂಬಂಧಪಟ್ಟ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ.

ಜಿಲ್ಲೆಯಲ್ಲಿ 2018-19, 2019-20 ಮತ್ತು 2020-21 ನೇ ಸಾಲಿನಲ್ಲಿ ಆದ ಭಾರಿ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರಿ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ - ಪಾಸ್ತಿಗಳಿಗೆ ಹಾನಿಯಾಗಿದೆ. ಈ ಕಾರಣಕ್ಕೆ ಭಾರಿ ವಾಹನಕ್ಕೆ ತಡೆ ನೀಡಲಾಗಿದೆ. ಜಿಲ್ಲೆಯ ಮುಖಾಂತರ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಓದಿ: ಉತ್ತರಕನ್ನಡದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ : ಕಡಲತೀರದ ಜನರಲ್ಲಿ ಹೆಚ್ಚಿದ ಆತಂಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.