ETV Bharat / state

3ನೇ ಅಲೆಗೂ ಮುನ್ನ ಹೆಚ್ಚಿನ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣ : ಪ್ರತಾಪ್‌ ಸಿಂಹ

author img

By

Published : Jun 22, 2021, 9:24 PM IST

ಜುಲೈ 15ರೊಳಗೆ ಆಮ್ಲಜನಕ ಉತ್ಪಾದನಾ ಘಟಕದ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ. ಆ ದಿಸೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಕಾಮಗಾರಿ ವಹಿಸಲಾಗಿದೆ. ಆಮ್ಲಜನಕ ಉತ್ಪಾದನಾ ಘಟಕ ನಿರ್ಮಿಸುವುದರಿಂದ ಹೊರ ಜಿಲ್ಲೆಗಳಿಂದ ಆಮ್ಲಜನಕ ಪೂರೈಸಿಕೊಳ್ಳುವುದು ತಪ್ಪಲಿದೆ..

ಪ್ರತಾಪ್‌ ಸಿಂಹ
ಪ್ರತಾಪ್‌ ಸಿಂಹ

ಕೊಡಗು : ಕೋವಿಡ್-19 ಎರಡನೇ ಅಲೆ ಬಂದ ಸಂದರ್ಭದಲ್ಲಿ ಆಮ್ಲಜನಕ ಕೊರತೆ ಮನಗಂಡು 3ನೇ ಅಲೆ ಬರುವುದರೊಳಗೆ ಹೆಚ್ಚಿನ ಉತ್ಪಾದನಾ ಘಟಕವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಮಡಿಕೇರಿಯ ಜಿಲ್ಲಾ ಕೋವಿಡ್ ಆಸ್ಪತ್ರೆ ಆವರಣದಲ್ಲಿ ನೂತನ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣ ಮಾಡಲಾಗುತ್ತಿದೆ. ಇದರ ನಿರ್ಮಾಣ ಸ್ಥಳವನ್ನು ಸಂಸದ ಪ್ರತಾಪ್‌ ಸಿಂಹ ಮತ್ತು ಶಾಸಕರು ಇಂದು ಪರಿಶೀಲನೆ ಮಾಡಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಪ್ರತಾಪ್​ ಸಿಂಹ

ಮಡಿಕೇರಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಅಧಿಕಾರಿಗಳಿಂದ ಸಂಸದರು ಮತ್ತು ಶಾಸಕರು ಮಾಹಿತಿ ಪಡೆದರು. ಬಳಿಕ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಈಗಾಗಲೇ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 13 ಸಾವಿರ ಲೀಟರ್ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕವಿದೆ. ಜೊತೆಗೆ ಹೆಚ್ಚುವರಿಯಾಗಿ ಪ್ರತಿ ನಿಮಿಷಕ್ಕೆ ಒಂದು ಸಾವಿರ ಲೀ. ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣವಾಗುತ್ತಿದೆ. ಇದನ್ನು 1.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.

ಜುಲೈ 15ರೊಳಗೆ ಆಮ್ಲಜನಕ ಉತ್ಪಾದನಾ ಘಟಕದ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ. ಆ ದಿಸೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಕಾಮಗಾರಿ ವಹಿಸಲಾಗಿದೆ. ಆಮ್ಲಜನಕ ಉತ್ಪಾದನಾ ಘಟಕ ನಿರ್ಮಿಸುವುದರಿಂದ ಹೊರ ಜಿಲ್ಲೆಗಳಿಂದ ಆಮ್ಲಜನಕ ಪೂರೈಸಿಕೊಳ್ಳುವುದು ತಪ್ಪಲಿದೆ ಎಂದು ತಿಳಿಸಿದರು.

ಮೆಡಿಕಲ್ ಕಾಲೇಜಿನಲ್ಲಿಯೂ ಸಹ ಒಂದು ಆಮ್ಲಜನಕ ಉತ್ಪಾದನಾ ಘಟಕವಿದೆ. ಜೊತೆಗೆ ವಿರಾಜಪೇಟೆ ತಾಲೂಕು ಆಸ್ಪತ್ರೆಯಲ್ಲಿ ಈಗಾಗಲೇ ಆಮ್ಲಜನಕ ಉತ್ಪಾದನಾ ಘಟಕ ಆರಂಭವಾಗಿದೆ. ಸೋಮವಾರಪೇಟೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಆರಂಭವಾಗಲಿದೆ. ಈ ಮೂಲಕ ಎಲ್ಲಾ ಆಸ್ಪತ್ರೆಗಳಲ್ಲೂ ಅತ್ಯುನ್ನತ ಆರೋಗ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.