ಮಡಿಕೇರಿ: ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ನೆಲ್ಯಹುದಿಕೇರಿ ಭಾಗದಲ್ಲಿ ಕಾವೇರಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಿಸಲಾಗುತ್ತಿದ್ದು, ಗ್ರಾಮಸ್ಥರೇ ಲಾರಿಯನ್ನು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಕಳೆದ 2 ತಿಂಗಳಿನಿಂದ ನಲ್ವತ್ತೆಕರೆ ಪ್ರದೇಶದಿಂದ ಕೆ.ಆರ್.ನಗರ ಮತ್ತಿತರೆಡೆಗೆ ಅಕ್ರಮವಾಗಿ ಮರಳು ಸಾಗಾಟವಾಗುತ್ತಿದೆ. ಸಿಸಿ ಕ್ಯಾಮರಾ ಅಳವಡಿಸಿದ್ದರೂ ನಿರಂತರವಾಗಿ ಮರಳು ದಂಧೆ ನಡೆಯುತ್ತಿತ್ತು. ಈ ಕುರಿತು ಯಾವುದೇ ಅಧಿಕಾರಿಗಳು ಕ್ರಮ ಕೈಗೊಳ್ಳದ ಕಾರಣ ಗ್ರಾಮಸ್ಥರೇ ಲಾರಿಯನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮಧ್ಯ ರಾತ್ರಿ ಇಲ್ಲಿ ಮರಳು ದಂಧೆ ನಡೆಯುತ್ತಿದ್ದು, ಮರಳುಗಾರಿಕೆಗೆ ಬಳಸಿದ ಹಿಟಾಚಿ ಸೇರಿದಂತೆ ಎಲ್ಲ ಯಂತ್ರಗಳನ್ನು ಮತ್ತು ಅಕ್ರಮವಾಗಿ ತೆಗೆದಿರುವ ಮರಳನ್ನು ವಶಕ್ಕೆ ಪಡೆಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಅಕ್ರಮ ಮರಳು ಸಾಗಾಟಕ್ಕೆ ಕಡಿವಾಣ ಹಾಕಬೇಕಿದೆ.
ಇದನ್ನೂ ಓದಿ: ಹೈದರಾಬಾದ್ ಏರ್ಪೋರ್ಟ್: ಮಹಿಳಾ ಪ್ರಯಾಣಿಕಳ ಗುದನಾಳದಲ್ಲಿ ಚಿನ್ನ ಪತ್ತೆ