ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಸಹಕಾರ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವರು ಇಂದು ಬೆಳಿಗ್ಗೆ ಉದ್ಘಾಟನೆ ಮಾಡಿದರು.
ಈ ಸುದ್ದಿಯನ್ನೂ ಓದಿ: ಶ್ರೀಮಂತರು ಬಿಪಿಎಲ್ ಕಾರ್ಡ್ ಹೊಂದಿದ್ದರೆ, ತಕ್ಷಣ ವಾಪಸ್ ಮಾಡಿ: ಸಿಎಂ ಬಿಎಸ್ವೈ
ಮಡಿಕೇರಿ ವಿಧಾನಸಭಾ ಸದಸ್ಯರಾದ ಶ್ರೀ ಅಪ್ಪಚ್ಚು ರಂಜನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಕೊಡಂದೇರ ಪಿ. ಗಣಪತಿ ಸೇರಿದಂತೆ ಜಿಲ್ಲೆಯ ಹಲವು ಜನಪ್ತತಿನಿಧಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೆ.ಎಸ್. ಕೃಷ್ಣೇಗೌಡ ವಹಿಸಿದ್ದರು.