ETV Bharat / state

ಅತೃಪ್ತ ಮೈತ್ರಿ ಶಾಸಕರ ರಾಜೀನಾಮೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ಶಾಸಕರ ರಾಜೀನಾಮೆ ಖಂಡಿಸಿ ಕೊಡಗು ಜಿಲ್ಲೆಯಲ್ಲಿ ಜೆಡಿಎಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.

author img

By

Published : Jul 12, 2019, 1:46 PM IST

ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ಮಡಿಕೇರಿ: ಮೈತ್ರಿ ಸರ್ಕಾರದ ಅತೃಪ್ತ ಶಾಸಕರ ರಾಜೀನಾಮೆ ಖಂಡಿಸಿ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಕೊಡಗಿನಲ್ಲಿ ಪ್ರತಿಭಟನೆ ನಡೆಸಲಾಯಿತು.‌

ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಸೇರಿದ ಜೆಡಿಎಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನಿರ್ದೇಶನದಂತೆ ಮೈತ್ರಿ ಶಾಸಕರು ಕೋಟಿ, ಕೋಟಿ ಹಣಕ್ಕೆ ಮಾರಾಟವಾಗಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ, ಅತೃಪ್ತರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟದಲ್ಲೇ ಕಂಡು ಕೇಳರಿಯದ ರೀತಿಯಲ್ಲಿ ಕೀಳುಮಟ್ಟದ ರಾಜಕೀಯ ಬೆಳವಣಿಗೆಗಳು ರಾಜ್ಯದಲ್ಲಿ ನಡೆಯುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ರು.

ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ಜೆಡಿಎಸ್ ನನಗೆ ರಾಜಕೀಯ ಪುನರ್ಜನ್ಮ ಕೊಟ್ಟಿದೆ ಎಂದಿದ್ದ ಹಿರಿಯ ಮುಖಂಡ ಹೆಚ್. ವಿಶ್ವನಾಥ್ ಅವರೂ ಪಕ್ಷ ತೊರೆದಿರುವುದು ಕಾರ್ಯಕರ್ತರಲ್ಲಿ ನೋವುಂಟು ಮಾಡಿದೆ. ಜೆಡಿಎಸ್ ನಲ್ಲಿ ಎಲ್ಲಾ ರೀತಿಯ ರಾಜಕೀಯ ಸವಲತ್ತುಗಳನ್ನು ಅನುಭವಿಸಿ ಪಕ್ಷಕ್ಕೆ ಅನ್ಯಾಯ ಮಾಡಿದ್ದಾರೆ. ಮುಂದೊಂದು ದಿನ ಬಿಜೆಪಿಯಲ್ಲೂ ಇಂತಹ ಬೆಳವಣಿಗೆಗಳು ತಪ್ಪಿದ್ದಲ್ಲ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಎಚ್ಚರಿಸಿದರು.

Intro:ಅತೃಪ್ತ ಮೈತ್ರಿ ಶಾಸಕರ ರಾಜೀನಾಮೆ: ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ 

ಕೊಡಗು: ಮೈತ್ರಿ ಸರ್ಕಾರದ ಅತೃಪ್ತ ಶಾಸಕರ ರಾಜೀನಾಮೆ  ಖಂಡಿಸಿ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.‌

ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಸೇರಿದ ಜೆಡಿಎಸ್  ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನಿರ್ದೇಶನದಂತೆ ಮೈತ್ರಿ ಶಾಸಕರು ಕೋಟಿ, ಕೋಟಿ ಹಣಕ್ಕೆ ಮಾರಾಟವಾಗಿದ್ದಾರೆ ಎಂದು ಆರೋಪಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ರಾಷ್ಟದಲ್ಲೇ ಕಂಡು ಕೇಳರಿಯದ ರೀತಿಯಲ್ಲಿ ಕೀಳು ಮಟ್ಟದ ರಾಜಕೀಯ ಬೆಳವಣಿಗೆಗಳು ರಾಜ್ಯದಲ್ಲಿ ನಡೆಯುತ್ತಿದೆ. ಜೆಡಿಎಸ್ ನನಗೆ ರಾಜಕೀಯ ಪುನರ್ಜನ್ಮ ಕೊಟ್ಟಿದೆ ಎಂದಿದ್ದ  ಹಿರಿಯ ಮುಖಂಡ ಎಚ್.ವಿಶ್ವನಾಥ್ ಅವರೂ ಪಕ್ಷ ತೊರೆದಿರುವುದು ಕಾರ್ಯಕರ್ತರಲ್ಲಿ ನೋವುಂಟು ಮಾಡಿದೆ. ಜೆಡಿಎಸ್ ನಲ್ಲಿ ಎಲ್ಲಾ ರೀತಿಯ ರಾಜಕೀಯ ಸವಲತ್ತುಗಳನ್ನು ಅನುಭವಿಸಿ ಪಕ್ಷಕ್ಕೆ ಅನ್ಯಾಯ ಮಾಡಿದ್ದಾರೆ.ಮುಂದೊಂದು ದಿನ ಬಿಜೆಪಿಯಲ್ಲೂ ಇಂತಹ ಬೆಳೆವಣಿಗಳು ತಪ್ಪಿದ್ದಲ್ಲ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ತಿಳಿಸಿದರು. 

ಬೈಟ್- ಕೆ.ಎಂ.ಗಣೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ 

-ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.

Body:0

Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.