ಮಡಿಕೇರಿ: ಕಾವೇರಿ ನೀರಾವರಿ ನಿಗಮದ ವತಿಯಿಂದ ತಲಕಾವೇರಿಯಲ್ಲಿ ಹಮ್ಮಿಕೊಂಡಿರುವ ಕಾವೇರಿ ನದಿ ಉತ್ಸವಕ್ಕೆ ಅಕ್ಟೋಬರ್ 21 ರಂದು ಬೆಳಗ್ಗೆ 8.30 ಕ್ಕೆ ಚಾಲನೆ ದೊರೆಯಲಿದ್ದು, ಬಳಿಕ ಗಣಪತಿ ಮತ್ತು ಈಶ್ವರ ಮಂದಿರದಲ್ಲಿ ಪೂಜೆ, ಬ್ರಹ್ಮಕುಂಡಿಕೆ ಬಳಿ ಪೂಜೆ, ಕಾವೇರಿ ನದಿ ಸಂರಕ್ಷಣೆ ಪ್ರತಿಜ್ಞಾ ವಿಧಿ, ಕಾವೇರಿ ನದಿ ಸಂರಕ್ಷಣಾ ಕರಪತ್ರಗಳ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆ 11 ಗಂಟೆಗೆ ಭಾಗಮಂಡಲದಲ್ಲಿ ಕಾವೇರಿ ನದಿ ಉತ್ಸವದ ಕಾರ್ಯಕ್ರಮ ನಡೆಯಲಿದೆ. ಭಗಂಡೇಶ್ವರ ಕ್ಷೇತ್ರದಲ್ಲಿ ಪೂಜೆ, ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ಜೀವನದಿ ಕಾವೇರಿಗೆ ಮಹಾ ಆರತಿ ನಡೆಸಲಾಗುವುದು. ಬಳಿಕ ಮಂತ್ರಘೋಷ ಹಾಗೂ ನಾಗರಿಕರಿಗೆ ನದಿ ಸಂರಕ್ಷಣೆ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಲಾಗುವುದು. ಬಳಿಕ ಮಧ್ಯಾಹ್ನ 3 ಗಂಟೆಗೆ ಕುಶಾಲನಗರದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಕಾವೇರಿ ನದಿ ಉತ್ಸವದ ಸಭಾ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ: 21 ರಂದು ಕಾವೇರಿ ನದಿ ಉತ್ಸವ; ಅಗತ್ಯ ಸಹಕಾರಕ್ಕೆ ಮನವಿ ಮಾಡಿದ ಸಚಿವರು!
ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ.ಕಾರಜೋಳ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ, ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಪ್ರಜ್ವಲ್ ರೇವಣ್ಣ, ಶಾಸಕರಾದ ಎಚ್.ಪಿ.ಮಂಜುನಾಥ್, ಎ.ಟಿ.ರಾಮಸ್ವಾಮಿ, ಸಾ.ರಾ.ಮಹೇಶ್, ಕೆ.ಮಹದೇವ್, ಎಂ.ಪಿ.ಸುಜಾ ಕುಶಾಲಪ್ಪ, ಆಯನೂರು ಮಂಜುನಾಥ್, ಎಸ್.ಎಲ್.ಬೋಜೇಗೌಡ, ಸೂರಜ್ ರೇವಣ್ಣ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ಕುಶಾಲನಗರ ಪ.ಪಂ. ಅಧ್ಯಕ್ಷರಾದ ಜಯವರ್ಧನ್, ಭಾಗಮಂಡಲ ಗ್ರಾ.ಪಂ.ಅಧ್ಯಕ್ಷರಾದ ಪೆಮಿತಾ ಇತರರು ಪಾಲ್ಗೊಳ್ಳಲಿದ್ದಾರೆ.