ETV Bharat / state

ಜೀವನದಿ ಕಾವೇರಿ ತೀರ್ಥೋದ್ಭವಕ್ಕೆ ದಿನಾಂಕ ನಿಗದಿ, ವಿವಿಧ ಪೂಜಾ ಕಾರ್ಯಕ್ರಮ ಆಯೋಜನೆ

2023ರ ಅಕ್ಟೋಬರ್ ಮಾಹೆಯಲ್ಲಿ ಶ್ರೀ ಕಾವೇರಿ ತುಲಾಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆ ಪ್ರಯುಕ್ತ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಪೂಜಾ ಕಾರ್ಯಕ್ರಮ ನಡೆಯಲಿವೆ.

Kaveri Theerthodbhava
ಜೀವನದಿ ಕಾವೇರಿ ತೀರ್ಥೋಧ್ಭವ
author img

By ETV Bharat Karnataka Team

Published : Sep 20, 2023, 10:07 PM IST

ಕೊಡಗು: ಕನ್ನಡ ನಾಡಿನ‌ ಜೀವನದಿ ತಾಯಿ ಕಾವೇರಿ ತೀರ್ಥೋದ್ಭವಕ್ಕೆ ದಿನಾಂಕವನ್ನು ನಿಗದಿ ಮಾಡಲಾಗಿದೆ. ಅಕ್ಟೋಬರ್ 17ರ ರಾತ್ರಿ 1:27ಕ್ಕೆ ಬ್ರಹ್ಮಗಿರಿ ತಪ್ಪಲಿನ ಪವಿತ್ರ ತಲಕಾವೇರಿ ಕ್ಷೇತ್ರದಲ್ಲಿ ತೀರ್ಥ ರೂಪಿಣಿಯಾಗಿ ಕಾವೇರಿ ಮಾತೆ ಭಕ್ತರಿಗೆ ದರ್ಶನ ನೀಡಲಿದ್ದಾಳೆ. 2023ರ ಅಕ್ಟೋಬರ್ ಮಾಹೆಯಲ್ಲಿ ಶ್ರೀ ಕಾವೇರಿ ತುಲಾಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆ ಪ್ರಯುಕ್ತ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಲಿವೆ.

ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸೆ. 27 ರಂದು ಬೆಳಗ್ಗೆ 9.29 ಗಂಟೆಗೆ ಸಲ್ಲುವ ತುಲಾಲಗ್ನದಲ್ಲಿ ‘ಪತ್ತಾಯಕ್ಕೆ ಅಕ್ಕಿ ಹಾಕುವುದು ನಡೆಯಲಿದೆ. ಅಕ್ಟೋಬರ 05 ರಂದು ಬೆಳಗ್ಗೆ 8.31 ನಿಮಿಷಕ್ಕೆ ತುಲಾ ಲಗ್ನದಲ್ಲಿ ‘ಆಜ್ಞಾ ಮುಹೂರ್ತ’. ಅ.15 ರಂದು ಮಧ್ಯಾಹ್ನ 11.45 ಗಂಟೆಗೆ ಸಲ್ಲುವ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು ಮತ್ತು ಸಂಜೆ 4.5 ಗಂಟೆಗೆ ಸಲ್ಲುವ ಕುಂಭ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇಡಲಾಗುವುದು.
ಅ.17 ರಂದು ರಾತ್ರಿ 1.27 ನಿಮಿಷಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ’ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸಿಡಬ್ಲ್ಯುಎಂಎ ಆದೇಶ ಮರುಪರಿಶೀಲನೆಗೆ ನಿರ್ದೇಶಿಸವಂತೆ ಸರ್ಕಾರ ಸುಪ್ರೀಂಗೆ ಮನವಿ

ರಾಜ್ಯದಲ್ಲಿ ತೀವ್ರ ಬರಗಾಲದಿಂದಾಗಿ ನೀರಿನ ತೀವ್ರ ಕೊರತೆ ಇದ್ದರೂ, ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್​​ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಆದೇಶಿಸಿದ್ದು, ಅದನ್ನು ಮರುಪರಿಶೀಲನೆ ನಡೆಸುವಂತೆ ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ಗೆ ನವದೆಹಲಿಯಲ್ಲಿ ಬುಧವಾರ ಅರ್ಜಿ ಸಲ್ಲಿಸಿದೆ. ಜೊತೆಗೆ ಇದೊಂದು ವಿಕೃತ ಮತ್ತು ಕಾನೂನುಬಾಹಿರ ಆದೇಶವಾಗಿದೆ ಎಂದೂ ಅಸಮಾಧಾನ ವ್ಯಕ್ತಪಡಿಸಿದೆ.

ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಅಣೆಕಟ್ಟೆಗಳಲ್ಲಿ ಬಹಳಷ್ಟು ನೀರು ಸಂಗ್ರಹವಾಗಿಲ್ಲ. ಕಾವೇರಿ ಜಲಾನಯನ ಪ್ರದೇಶ ಸೇರಿದಂತೆ ರಾಜ್ಯದೆಲ್ಲೆಡೆ ವರುಣನ ಅವಕೃಪೆ ಬಿದ್ದಿದೆ. ನೈಋತ್ಯ ಮಾನ್ಸೂನ್ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ನೆರೆರಾಜ್ಯ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗುತ್ತಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಜೂನ್ 01, 2023 ರಿಂದ ಸೆಪ್ಟೆಂಬರ್ 18, 2023 ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಒಳಹರಿವು 110.875 ಟಿಎಂಸಿ ಬಂದಿದ್ದರೆ, ಕಳೆದ 30 ವರ್ಷಗಳಲ್ಲಿ ಸರಾಸರಿ 238.055 ಟಿಎಂಸಿ ಇದೆ. ಈ ಬಾರಿ ಒಳಹರಿವು ಗಣನೀಯವಾಗಿ ಕುಸಿದು, ಕಾವೇರಿ ಜಲಾನಯನ ಪ್ರದೇಶದಲ್ಲಿ ಶೇಕಡಾ 53.42 ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಸರ್ಕಾರ ಹೇಳಿದೆ.

ಇದನ್ನೂಓದಿ:ಕರ್ನಾಟಕ ಸಂಕಷ್ಟದಲ್ಲಿದೆ: ನಾವೆಲ್ಲರೂ ಪಣತೊಟ್ಟು ಹೊರಾಡೋಣ, ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.