ETV Bharat / state

ತಾವರೆ-ತೆನೆ ಮೈತ್ರಿ.. ಅಡ್ಡ ಮತದಾನಗೈದ ಜೆಡಿಎಸ್ ಸದಸ್ಯರ ವಿರುದ್ಧ ಕಾರ್ಯಕರ್ತರ ಕಿಡಿ!! - kodagu

ಅಡ್ಡ ಮತದಾನ ಮಾಡಿರುವ ಮೂವರನ್ನು ಇಂದಿನಿಂದಲೇ ಪಕ್ಷದಿಂದ ಅನರ್ಹಗೊಳಿಸುವುದಾಗಿ ತಿಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ..

JDS  Activist outrage
ಜೆಡಿಎಸ್ ಸದಸ್ಯರ ವಿರುದ್ಧ ಕಾರ್ಯಕರ್ತರ ಆಕ್ರೋಶ..!
author img

By

Published : Nov 3, 2020, 2:02 PM IST

ಕುಶಾಲನಗರ/ ಕೊಡಗು: ತೀವ್ರ ಕುತೂಹಲ ಕೆರಳಿಸಿದ್ದ ಕುಶಾಲನಗರ ಪಟ್ಟಣ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡವು.

ಬಹು ನಿರೀಕ್ಷೆಯಂತೆ ಬಿಜೆಪಿಗೆ ಅಧ್ಯಕ್ಷ ಮತ್ತು ಜೆಡಿಎಸ್‌ಗೆ ಉಪಾಧ್ಯಕ್ಷ ಸ್ಥಾನದ ಒಪ್ಪಂದ ಮಾಡಿಕೊಂಡವು. ಅಧ್ಯಕ್ಷ ಸ್ಥಾನವನ್ನು ಬಿಜೆಪಿಯ ಜಯವರ್ಧನ ಕೇಶವ, ಉಪಾಧ್ಯಕ್ಷೆಯಾಗಿ ಜೆಡಿಎಸ್‌ನಿಂದ ಸುರಾಯಭಾನು ಅಧಿಕಾರ ಸ್ವೀಕರಿದರು.

ಫಲಿತಾಂಶದ ಬಳಿಕ ಪಟ್ಟಣ ಪಂಚಾಯತ್‌ನಿಂದ ಹೊರ ಬಂದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಅದಕ್ಕೆ ಸಹಕಾರ ನೀಡಿದ ಶಾಸಕ ಅಪ್ಪಚ್ಚು ರಂಜನ್ ಹಾಗೂ ಸಂಸದ ಪ್ರತಾಪ್ ಸಿಂಹ ಅವರಿಗೆ ಅದ್ಧೂರಿಯಾಗಿ ಸ್ವಾಗತ ಕೋರಿದರು.

ಅಡ್ಡ ಮತದಾನ ಮಾಡಿದ ಜೆಡಿಎಸ್ ಸದಸ್ಯರ ವಿರುದ್ಧ ಕಾರ್ಯಕರ್ತರ ಆಕ್ರೋಶ..

ಜೆಡಿಎಸ್ ಸದಸ್ಯರ ಅಡ್ಡ ಮತದಾನಕ್ಕೆ ಕಾರ್ಯಕರ್ತರ ಕಿಡಿ : ಹಣದ ಆಸೆಗೆ ಬಿಜೆಪಿಯೊಂದಿಗೆ ಒಳ ಒಪ್ಪಂದವನ್ನು ಮಾಡಿಕೊಂಡು ಬಿಜೆಪಿಗೆ ಸಹಕಾರ ನೀಡಿದ ಜೆಡಿಎಸ್ ಸದಸ್ಯರ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ವಿರುದ್ಧವಾಗಿ ಬಿಜೆಪಿ ಅಧಿಕಾರದ ಚುಕ್ಕಣಿ ಹಿಡಿಯಲು ಸಹಕಾರ ನೀಡಿದ ಜೆಡಿಎಸ್ ಸದಸ್ಯರ ಪರವಾಗಿ ಜಯ ಘೋಷಣೆಗಳನ್ನು ಕೂಗಿದರು. ಬಿಜೆಪಿ ಅನೈತಿಕ ರಾಜಕಾರಣ ಮಾಡುತ್ತಿದೆ. ಪಟ್ಟಣ ಪಂಚಾಯತ್‌ನಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಗೆ ಜೆಡಿಎಸ್ ನಾಯಕರೊಂದಿಗೆ ಮಾತನಾಡಿದ್ದೆವು.

ಅದಕ್ಕೆ ಅವರೂ ಒಪ್ಪಿಕೊಂಡಿದ್ದರು. 25 ರಿಂದ 30 ಲಕ್ಷಕ್ಕೆ ಜೆಡಿಎಸ್ ಸದಸ್ಯರು ತಮ್ಮನ್ನು ತಾವು ಮಾರಿಕೊಂಡಿದ್ದಾರೆ. ಇಂತಹವರನ್ನು ಜೆಡಿಎಸ್ ಸಾಕಷ್ಟು ನೋಡಿದೆ. ಅಡ್ಡ ಮತದಾನ ಮಾಡಿರುವ ಮೂವರನ್ನು ಇಂದಿನಿಂದಲೇ ಪಕ್ಷದಿಂದ ಅನರ್ಹಗೊಳಿಸುವುದಾಗಿ ತಿಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದವೂ ನಡೆಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.