ಕೊಡಗು: ತೋಟದಲ್ಲಿ ಹೋಗುತ್ತಿರುವಾಗ ಕೊಡಗು ವೈಲ್ಡ್ ಲೈಫ್ ಸೊಸೈಟಿ ಅಧ್ಯಕ್ಷ ಪರಿಸರವಾದಿ ಕರ್ನಲ್ ಸಿ.ಪಿ. ಮುತ್ತಣ್ಣ ಅವರ ಮೇಲೆ ಒಂಟಿ ಸಲಗ ದಾಳಿ ನಡೆಸಿರುವ ಘಟನೆ ಗೋಣಿಕೊಪ್ಪ ಸಮೀಪದ ಹೊಸೂರು ಬಳಿ ನಡೆದಿದೆ.
ಕಾಲು ಮುರಿತಕ್ಕೊಳಗಾದ ಮುತ್ತಣ್ಣ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.
ಜಿಲ್ಲೆಯಲ್ಲಿ ಹಲವು ದಿನಗಳಿಂದ ಕಾಡಾನೆ ದಾಳಿ ತಣ್ಣಗಾಗಿತ್ತು. ಆದ್ರೀಗ ಮತ್ತೆ ಆರಂಭವಾಗಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.