ಕೊಡಗು: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೋರ್ವ ಮೃತಪಟ್ಟಿದ್ದು, ಇದುವರೆಗೆ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿವೆ. ಸೋಮವಾರಪೇಟೆ ತಾಲೂಕಿನ ರಂಗಸಮುದ್ರದ 48 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ.
![kodagu corona deaths today](https://etvbharatimages.akamaized.net/etvbharat/prod-images/kn-kdg-03-09-20-death-av-7207093_09092020192154_0909f_02873_590.jpg)
ಇವರು ಸೆಪ್ಟೆಂಬರ್ 4ರಂದು ಜ್ವರ ಕಾಣಿಸಿಕೊಂಡಿತ್ತು. 7ರಂದು ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಕೊರೊನಾ ಪರೀಕ್ಷೆ ನಡೆಸಲಾಯಿತು. ನಂತರ ವ್ಯಕ್ತಿಗೆ ಕೊವೀಡ್ ಸೋಂಕು ದೃಢಪಟ್ಟಿತ್ತು.
ಮಡಿಕೇರಿಯ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟಿದ್ದಾನೆ.