ಕೊಡಗು: ಸೋಮವಾರಪೇಟೆ ತಾಲೂಕಿನ ನೆಲ್ಲಿಹುದಿಕೇರಿ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 61 ವರ್ಷದ ವ್ಯಕ್ತಿ ಸೇರಿದಂತೆ, ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 43 ವರ್ಷದ ವ್ಯಕ್ತಿಗೂ ಸೋಂಕು ಪತ್ತೆಯಾಗಿದೆ.
ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 11 ವರ್ಷದ ಬಾಲಕನಲ್ಲಿಯೂ ಸೋಂಕು ಕಾಣಸಿಕೊಂಡಿದೆ. ಅದೇ ಗ್ರಾಮದಲ್ಲಿ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 38 ವರ್ಷದ ವ್ಯಕ್ತಿಗೂ ಕೂಡ ಕೋವಿಡ್ ಹರಡಿದೆ.
ಸೋಮವಾರಪೇಟೆ ತಾಲೂಕು ನೆಲ್ಲಿಹುದಿಕೇರಿ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ 29 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ಪತ್ತೆಯಾಗಿದೆ.
ಶನಿವಾರಸಂತೆಯ ಶಿರಂಗಾಲ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ದ್ವಿತೀಯ ಸಂಪರ್ಕಿಯಾದ ಶನಿವಾರಸಂತೆಯ ಶಿರಂಗಾಲ ಗ್ರಾಮದ ಗುಂಡೂರಾವ್ ಬಡಾವಣೆ ನಿವಾಸಿ 47 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಅಲ್ಲದೇ ವಿರಾಜಪೇಟೆ ತಾಲೂಕು ತಿತಿಮತಿ ಗ್ರಾಮದ 65 ವರ್ಷದ ವ್ಯಕ್ತಿಯೊಬ್ಬರಿಗೆ ಜ್ವರದ ಲಕ್ಷಣವಿದ್ದು, ಅವರಿಗೆ ಸೋಂಕು ತಗುಲಿದೆ.
ಮೊದಲ 06 ಪ್ರಕಣಗಳು ನಿಯಂತ್ರಿತ ಪ್ರದೇಶದಲ್ಲಿಯೇ ವರದಿ ಆಗಿರುವುದರಿಂದ ಹೊಸದಾಗಿ ನಿಯಂತ್ರಿತ ಪ್ರದೇಶಗಳನ್ನು ತೆರೆದಿಲ್ಲ. ಜಿಲ್ಲೆಯಲ್ಲಿ ಹೊಸದಾಗಿ ವಿರಾಜಪೇಟೆ ತಾಲೂಕಿನ ತಿತಿಮತಿ ಗ್ರಾಮದಲ್ಲಿ ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 54ಕ್ಕೇರಿವೆ.
ಇವುಗಳಲ್ಲಿ 3 ಪ್ರಕರಣಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು 51 ಸೋಂಕಿತರಿಗೆ ಜಿಲ್ಲಾ ಕೊವೀಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೆ ಜಿಲ್ಲೆಯಲ್ಲಿ 23 ನಿಯಂತ್ರಿತ ಪ್ರದೇಶಗಳಿವೆ.