ಕೊಡಗು: ವಿರಾಜಪೇಟೆ ತಾಲೂಕಿನ ತಿತಿಮತಿ ಅಬ್ಬೂರುಕಟ್ಟೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳು ಓಡಾಡುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಾಫಿ ತೋಟಕ್ಕೆ ಬಂದ ಆನೆಗಳನ್ನು ಕಾಡಿಗಟ್ಟಿದರೂ ಅವುಗಳು ಮತ್ತೆ ಆಹಾರ ಅರಸಿ ತೋಟಗಳಿಗೆ ಲಗ್ಗೆ ಇಡುತ್ತಿವೆ. ಇದರಿಂದ ಕಾಫಿ ಬೆಳೆಗಾರರಿಗೆ ಸಮಸ್ಯೆಯಾಗುತ್ತಿದೆ. ಬೆಳೆದ ಬೆಳೆಗಳನ್ನು ಆನೆಗಳು ಹಾಳು ಮಾಡುತ್ತಿವೆ ಎಂದು ಸಾರ್ವಜನಿಕರು ದೂರಿದ್ದಾರೆ.
ಇದನ್ನೂ ಓದಿ: ಕಲಬುರಗಿ : ಶ್ರೀ ದತ್ತಾತ್ರೇಯ ದೇವಸ್ಥಾನದ ಐವರು ಅರ್ಚಕರ ವಿರುದ್ಧ ಎಫ್ಐಆರ್