ETV Bharat / state

ಕೊಡಗು: ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ.. ಅರಣ್ಯ ಇಲಾಖೆಯ ಸಿಬ್ಬಂದಿ ಸಾವು - kodagu elephant attack

ಕಾಡಾನೆ ದಾಳಿಗೆ ಅರಣ್ಯ ಇಲಾಖೆಯ ಮತ್ತೋರ್ವ ಸಿಬ್ಬಂದಿ ಮೃತಪಟ್ಟಿದ್ದಾರೆ. ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೆದಕಲ್ ಗ್ರಾಮದಲ್ಲಿ ಕಾಡಾನೆ ಕಾರ್ಯಾಚರಣೆ ವೇಳೆ ಘಟನೆ ನಡೆದಿದೆ.

forester died in elephant attack
ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ
author img

By ETV Bharat Karnataka Team

Published : Sep 5, 2023, 7:58 AM IST

Updated : Sep 5, 2023, 8:50 AM IST

ಕೊಡಗು: ಹಾಸನದಲ್ಲಿ ಕಾಡಾನೆ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಅಂತಹದೇ ಮತ್ತೊಂದು ಘಟನೆ ಕೊಡಗು ಜಿಲ್ಲಿಯ ಸುಂಟಿಕೊಪ್ಪ ಸಮೀಪದ ಕೆದಕಲ್ ಗ್ರಾಮದಲ್ಲಿ ನಡೆದಿದೆ. ಸೋಮವಾರ ಕಾರ್ಯಾಚರಣೆಗೆ ತೆರಳಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಯೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಅರಣ್ಯ ಇಲಾಖೆಯ ಆನೆ ಕಾರ್ಯಪಡೆಯ ಸಿಬ್ಬಂದಿ ಗಿರೀಶ್ (35) ಮೃತಪಟ್ಟವರು.

ಸುಂಟಿಕೊಪ್ಪ ಸಮೀಪದ ಕೆದಕಲ್ ಗ್ರಾಮದಲ್ಲಿ ಕಾಡಾನೆ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದರು. ಈ ವೇಳೆ ಆನೆ ದಾಳಿ ಮಾಡಿದ್ದರಿಂದ ಗಿರೀಶ್ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಇಬ್ಬರ ಮೇಲೆ ದಾಳಿ ಮಾಡಿದ್ದ ಕಾಡಾನೆ : ಸುಂಟಿಕೊಪ್ಪ ಸಮೀಪದ ಕೆದಕಲ್ ಗ್ರಾಪಂ ವ್ಯಾಪ್ತಿಯ ಡಿ ಬ್ಲಾಕ್ ಬಳಿ ಬೈಕ್​​ನಲ್ಲಿ ಮರದ ಕೆಲಸಕ್ಕೆಂದು ತೆರಳುತ್ತಿದ್ದ ಸುಂಟಿಕೊಪ್ಪದ ನಿವಾಸಿ ಮುರುಗೇಶ್ ಎಂಬುವವರ ಮೇಲೆ ಒಂಟಿಸಲಗ ಮೊದಲು ದಾಳಿ ಮಾಡಿತ್ತು. ಇದರಿಂದ ಗಾಯಗೊಂಡಿದ್ದ ಮುರುಗೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಘಟನೆಯಿಂದ ಬೈಕ್​ಗೆ ಹಾನಿಯಾಗಿತ್ತು. ಅಲ್ಲಿಂದ ಕಾಲ್ಕಿತ್ತ ಕಾಡಾನೆ ಸ್ವಲ್ಪ ದೂರದಲ್ಲೇ ಇದ್ದ ಹಬೀಬ್ ತೋಟದತ್ತ ತೆರಳಿ ಮತ್ತೊಬ್ಬ ವ್ಯಕ್ತಿಯ ಮೇಲೂ ದಾಳಿ ಮಾಡಿತ್ತು.

ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ, ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸುತ್ತಿದ್ದರು. ಸುಂಟಿಕೊಪ್ಪ ಕೆದಕಲ್ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಒಂಟಿ ಸಲಗವನ್ನು ಮೀನುಕೊಲ್ಲಿ ಮೀಸಲು ಅರಣ್ಯಕ್ಕೆ ಓಡಿಸಲು 20 ಮಂದಿಯ ಆರ್​ಆರ್​ಟಿ ತಂಡ ಕಾರ್ಯಾಚರಣೆಗೆ ಇಳಿದಿತ್ತು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಅಟ್ಟಾಡಿಸಿಕೊಂಡು ಬಂದ ಕಾಡಾನೆ, ಗಿರೀಶ್ ಮೇಲೆ ದಾಳಿ ಮಾಡಿ ತುಳಿದು ಹಾಕಿದೆ. ಇದರಿಂದ ಗಿರೀಶ್ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಅರಿವಳಿಕೆ ಮದ್ದು ನೀಡಲೆಂದು ತೆರಳಿದಾಗ ದಾಳಿ ಮಾಡಿದ ಕಾಡಾನೆ: ಅರಣ್ಯ ಸಿಬ್ಬಂದಿ ಸಾವು

ಕಾಡಾನೆ ದಾಳಿಗೆ ಅರವಳಿಕೆ ತಜ್ಞ ಬಲಿ: ಕಳೆದ ವಾರ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ಗಾಯಗೊಂಡ ಕಾಡಾನೆಗೆ ಚಿಕಿತ್ಸೆ ನೀಡಲು ಕಾರ್ಯಾಚರಣೆಗೆ ಅರಣ್ಯ ಇಲಾಖೆಯ ಸಿಬ್ಬಂದಿ ತೆರಳಿತ್ತು. ಈ ವೇಳೆ ಕಾಡಾನೆ ದಾಳಿ ಮಾಡಿದ್ದರಿಂದ ಅರಣ್ಯ ಇಲಾಖೆ ಸಿಬ್ಬಂದಿ ಶಾರ್ಪ್​ಶೂಟರ್ ಮತ್ತು ಅರವಳಿಕೆ ತಜ್ಞ ವೆಂಕಟೇಶ್ ಮೃತಪಟ್ಟಿದ್ದರು. ಆಲೂರು ತಾಲೂಕಿನ ಹೊನ್ನವಳ್ಳಿ ಗ್ರಾಮದ ವೆಂಕಟೇಶ್ ಗುತ್ತಿಗೆ ಆಧಾರದ ಮೇಲೆ ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಇವರು ಸುಮಾರು 40ಕ್ಕೂ ಹೆಚ್ಚು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ರೇಡಿಯೋ ಕಾಲರ್ ಅಳವಡಿಕೆ, ಕಾಡಾನೆ ಸ್ಥಳಾಂತರ ಸೇರಿ ಹಲವು ಕಾಡಾನೆ ಕಾರ್ಯಾಚರಣೆಯಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು.

ಹೆಚ್​ ಡಿ ಕೋಟೆಯಲ್ಲಿ ಹುಲಿ ದಾಳಿ: ಮೈಸೂರು ಜಿಲ್ಲೆಯ ಹೆಚ್​ ಡಿ ಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಹುಲಿ ದಾಳಿಗೆ ಬಾಲಕ ಬಲಿಯಾಗಿದ್ದಾನೆ. ಜಮೀನಿನಲ್ಲಿ ಆಟವಾಡುತ್ತಿದ್ದ 7 ವರ್ಷದ ಚರಣ್ ಎಂಬ ಬಾಲಕನ ಮೇಲೆ ಹುಲಿ ದಾಳಿ ಮಾಡಿ ತಿಂದು ಹಾಕಿದೆ. ಘಟನೆ ಬಳಿಕ ಮೃತ ಬಾಲಕ ಕುಟುಂಬಕ್ಕೆ ಅರಣ್ಯ ಇಲಾಖೆ 15 ಲಕ್ಷ ರೂ ಪರಿಹಾರ ಘೋಷಿಸಿದೆ.

ಚಾಮರಾಜನಗರದಲ್ಲಿ ಕಾಡು ಹಂದಿ ದಾಳಿ : ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ವಿದ್ಯಾರ್ಥಿಯೋರ್ವನ ಮೇಲೆ ಕಾಡು ಹಂದಿ ದಾಳಿ ನಡೆಸಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಮಹದೇಶ್ವರ ಬೆಟ್ಟದ ನಿವಾಸಿ 9ನೇ ತರಗತಿಯ ನವೀನ್ ಗಾಯಗೊಂಡ ವಿದ್ಯಾರ್ಥಿ. ಶಾಲೆ ಬಿಟ್ಟ ಬಳಿಕ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಳೆಯೂರು ಮುಖ್ಯ ರಸ್ತೆಯಲ್ಲಿ ಕಾಡು ಹಂದಿ ದಾಳಿ ಮಾಡಿದೆ. ವಿದ್ಯಾರ್ಥಿ ಎಡಗಾಲಿಗೆ ತೀವ್ರ ಗಾಯವಾಗಿದ್ದು, ಮಲೆಮಹದೇಶ್ವರ ಬೆಟ್ಟದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿದೆ.

Last Updated : Sep 5, 2023, 8:50 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.