ಕೊಡಗು : ಜಿಲ್ಲೆಯ ಕಾಲೇಜುವೊಂದರ ಉಪನ್ಯಾಸಕರಿಗೆ ಕೊರೊನಾ ಸೋಂಕು ಹರಡಿದ ಹಿನ್ನೆಲೆ ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸದೆ ರಜೆ ನೀಡಿ ಮನೆಗೆ ಕಳುಹಿಸಲಾಗಿದೆ ಎನ್ನಲಾಗ್ತಿದೆ. ಇದರಿಂದ ಪೋಷಕರಿಗೆ ಸೋಂಕು ಹರಡುವ ಭೀತಿ ಎದುರಾಗಿದೆ. ಅಲ್ಲದೆ, ಜಿಲ್ಲೆಯಲ್ಲಿ ಈಗಾಗಲೇ 21 ಪಾಸಿಟಿವ್ ಪ್ರಕರಣಗಳು ಕಂಡುಬಂದಿದೆ.
ಪೊನ್ನಪೇಟೆಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕರೊಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ರೆ ವಿದ್ಯಾರ್ಥಿಗಳಿಗೆ ಹಾಗೂ ಜೊತೆಗಿದ್ದ ಶಿಕ್ಷಕರಿಗೆ, ಸಿಬ್ಬಂದಿಗೆ ಕೊರೊನಾ ಟೆಸ್ಟ್ ಮಾಡದೆ ಕಾಲೇಜಿಗೆ ರಜೆ ನೀಡಲಾಗಿದೆ.
ಇದರಿಂದ ಪೋಷಕರಿಗೆ, ಸ್ಥಳೀಯರಿಗೆ ಆತಂಕ ಶುರುವಾಗಿದ್ದು, ಕೊರೊನಾ ಪರೀಕ್ಷೆ ಮಾಡುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಸ್ಥಳೀಯರ ಒತ್ತಾಯದ ಮೇಲೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಶಾಲೆಗೆ ಭೇಟಿ ನೀಡಿದ್ದು, ಸ್ಯಾನಿಟೈಸ್ ಮಾಡಲು ಮುಂದಾಗಿದ್ದಾರೆ.