ಸ್ಥಳೀಯರನ್ನು ಕಡೆಗಣಿಸಿ ಹೊರ ಜಿಲ್ಲೆಯವರಿಗೆ ಉದ್ಯೋಗ: ಮಂಗಳೂರು ವಿವಿ ವಿರುದ್ಧ ಆಕ್ರೋಶ - kannada top news
ಕುಶಾಲನಗರ ತಾಲ್ಲೂಕಿನಲ್ಲಿರುವ ಚಿಕ್ಕಾಳುವಾರ ಗ್ರಾಮದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ಸ್ಥಳೀಯರನ್ನು ಕಡೆಗಣಿಸಿ ಬೇರೆ ಜಿಲ್ಲೆಯವರಿಗೆ ಉದ್ಯೋಗ ನೀಡುತ್ತಿದ್ದಾರೆಂದು ಜನರು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.
ಕೊಡಗು: ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿಗಳು ಲಂಚ ಪಡೆದು ಹೊರ ಜಿಲ್ಲೆಯವರಿಗೆ ಉದ್ಯೋಗ ನೀಡುತ್ತಿದ್ದಾರೆ ಎಂದು ಆರೋಪಿಸಿ ಕೊಡಗು ಜಿಲ್ಲೆಯ ಜನರು ವಿಶ್ವವಿದ್ಯಾನಿಲಯದ ಕುಲಪತಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನಲ್ಲಿರುವ ಚಿಕ್ಕಾಳುವಾರ ಗ್ರಾಮದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳು ಕೊಡಗು ಜಿಲ್ಲೆಯವರನ್ನು ಬಿಟ್ಟು ಲಂಚ ಪಡೆದು ಹೊರಗುತ್ತಿಗೆ ಆಧಾರದ ಮೇಲೆ ಬೇರೆ ಜಿಲ್ಲೆಯವರನ್ನು ಕಾಲೇಜಿಗೆ ಸೇರಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಲೇಜು ಇದೆ. ಆದರೆ, ಇಲ್ಲಿನ ಸುತ್ತಮುತ್ತಲಿನ ಸ್ಥಳೀಯರಿಗೆ ಉದ್ಯೋಗವಕಾಶ ನೀಡುತ್ತಿಲ್ಲ. ವಿಶ್ವವಿದ್ಯಾಲಯಕ್ಕೆ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ. ಅದಕ್ಕಾಗಿ ಸ್ಥಳೀಯರನ್ನು ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಕಾಲೇಜಿನ ಮುಂದೆ ನೂರಾರು ಜನರು ಸೇರಿ ವಿಶ್ವವಿದ್ಯಾನಿಲಯಕ್ಕೆ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ಚಿಕ್ಕಮಗಳೂರು: ಮಗಳನ್ನು ರಕ್ಷಿಸಲು ಹೋಗಿ ತಾಯಿಯೂ ಕೆರೆಯಲ್ಲಿ ಮುಳುಗಿ ಸಾವು