ಕೊಡಗು: ಕೆಎಸ್ಆರ್‌ಟಿಸಿ ಐರಾವತ ಬಸ್ ಅಪಘಾತಕ್ಕೀಡಾಗಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೆರಂಬಾಡಿ ಬಳಿ ನಡೆದಿದೆ.
ಬೆಂಗಳೂರು ಮೂಲದ ಸ್ವಾಮಿ ಸಾವನ್ನಪ್ಪಿದ ಚಾಲಕ. ಬೆಂಗಳೂರು ಡಿಪೋಗೆ ಸೇರಿದ ಈ ಬಸ್ ವಿರಾಜಪೇಟೆಯಿಂದ ಕೇರಳಕ್ಕೆ ಮುಂಜಾನೆ 4.30ರ ಸಮಯಕ್ಕೆ ಹೊರಟಿತ್ತು. ಪೆರಂಬಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿಯಾಗಿದೆ.
ಬಸ್ನಲ್ಲಿದ್ದ ಪ್ರಯಾಣಿಕರಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ವಿರಾಜಪೇಟೆ ಪೊಲೀಸರು ಮತ್ತು ಕೇರಳದ ಟಾಸ್ಕ್ ಫೋರ್ಸ್ ತಂಡ ಭೇಟಿ ನೀಡಿ, ಬಸ್ನಲ್ಲಿದ್ದ ಜನರನ್ನು ರಕ್ಷಣೆ ಮಾಡಿದೆ. ಸತತ 4 ಗಂಟೆಗಳ ಪಯತ್ನದಿಂದ ಚಾಲಕನ ಮೃತದೇಹವನ್ನು ಹೊರತೆಗೆಯಲಾಗಿದೆ.