ಕೊಡಗು: ಜಿಲ್ಲೆಯಲ್ಲಿ 53 ತಜ್ಞ ವೈದ್ಯರ ಕೊರತೆ ಇದ್ದು, ಸ್ಥಳೀಯವಾಗಿ ವೈದ್ಯರನ್ನು ನೇಮಕ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೊರೊನಾ ವೈರಸ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವೈದ್ಯರ ಕೊರತೆ ಇದ್ದು, ಶೀಘ್ರವಾಗಿ ಅವುಗಳನ್ನು ಭರ್ತಿ ಮಾಡಬೇಕು ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ತಯಾರಿ ಬಗ್ಗೆಯೂ ಮುತುವರ್ಜಿ ವಹಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.