ETV Bharat / state

ಐತಿಹಾಸಿಕ ಮಂಜಿನ ನಗರಿ ಮಡಿಕೇರಿ ದಸರಾ ಉತ್ಸವಕ್ಕೆ ಅದ್ಧೂರಿ ಚಾಲನೆ - ಮಡಿಕೇರಿ ದಸರಾ

ನೂರಾರು ವರ್ಷಗಳ ಇತಿಹಾಸ ಹೊಂದಿರುವ ಮಂಜಿನ ನಗರಿ ಮಡಿಕೇರಿ ದಸರಾ ಉತ್ಸವಕ್ಕೂ ಚಾಲನೆ ದೊರೆತಿದೆ.

Madikeri dasara celebrations begins
ಐತಿಹಾಸಿಕ ಮಂಜಿನ ನಗರಿ ಮಡಿಕೇರಿ ದಸರಾ ಉತ್ಸವಕ್ಕೆ ಅದ್ಧೂರಿ ಚಾಲನೆ
author img

By

Published : Sep 27, 2022, 2:19 PM IST

ಮಡಿಕೇರಿ/ಕೊಡಗು: ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ನಿನ್ನೆ ಅದ್ದೂರಿ ಚಾಲನೆ ಸಿಕ್ಕಿದ್ದರೆ, ಇತ್ತ ಮಂಜಿನ ನಗರಿ ಮಡಿಕೇರಿ ದಸರಾ ಉತ್ಸವಕ್ಕೂ ಸೋಮವಾರ ಅದ್ಧೂರಿ ಚಾಲನೆ ನೀಡಲಾಗಿದೆ.

9 ದಿನಗಳ ಕಾಲ ನವರಾತ್ರಿ ಉತ್ಸವ ನಡೆಯಲಿದ್ದು, ಕರಗ ಹೊರುವ ಮೂಲಕ ಚಾಲನೆ ನೀಡಲಾಗಿದೆ. ವಿವಿಧ ಕಾರ್ಯಕ್ರಮಗಳೊಂದಿಗೆ ದಶಮಂಟಪ ಮೆರವಣಿಗೆ ಗಮನ ಸೆಳೆಯಲಿದೆ. 149 ವರ್ಷಗಳ ಇತಿಹಾಸ ಹೊಂದಿರುವ ಈ ದಸರಾ ಮಹೋತ್ಸಕ್ಕೆ ನಗರದ ನಾಲ್ಕು ಶಕ್ತಿದೇವತೆಗಳ ಕರಗಕ್ಕೆ ಪೂಜೆ ಸಲ್ಲಿಸುವ ಮೂಲಕ ಆರಂಭವಾಗಿದೆ.

ನಗರದ ಪಂಪಿನಕೆರೆ ಬಳಿಯಲ್ಲಿ ನಾಲ್ಕು ಕರಗಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದ ದಸರಾ ಸಮಿತಿ ಕಾರ್ಯಾಧ್ಯಕ್ಷ ಮಹೇಶ್ ಜೈನಿ, ಶಾಸಕರುಗಳಾ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್ ಹಾಗೂ ವಿಧಾನ ಪರಿಷತ್ ಸದಸ್ಯರುಗಳಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು.

ಐತಿಹಾಸಿಕ ಮಂಜಿನ ನಗರಿ ಮಡಿಕೇರಿ ದಸರಾ ಉತ್ಸವಕ್ಕೆ ಅದ್ಧೂರಿ ಚಾಲನೆ

ಕರಗಗಳಿಗೆ ಪೂಜೆ ಸಲ್ಲಿಸಿದ ದಸರಾ ಸಮಿತಿ ಸದಸ್ಯರು ದಸರಾ ಯಶಸ್ಸಿಗೆ ದೇವರಿಗೆ ಮೊರೆಯಿಟ್ಟಿದ್ದಾರೆ. ನಗರದ ಕುಂದೂರುಮೊಟ್ಟೆ ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ ಹಾಗೂ ಕಂಚಿ ಕಾಮಾಕ್ಷಮ್ಮ ದೇವಾಲಯಗಳ ಕರಗಗಳನ್ನು ಹೊತ್ತ ವ್ರತಧಾರಿಗಳು ನವರಾತ್ರಿಯ ಆರು ದಿನಗಳ ಕಾಲ ನಗರದ ಬೀದಿ ಬೀದಿಗಳಲ್ಲಿ ಮೆರವಣಿಗೆ ನಡೆಸಲಿದ್ದಾರೆ. ಶತಮಾನಗಳ ಹಿಂದೆ ಮಡಿಕೇರಿಯಲ್ಲಿ ಬರಗಾಲ ಉಂಟಾಗಿದ್ದ ಸಂದರ್ಭದಲ್ಲಿ ನಗರದ ಶಕ್ತಿ ದೇವತೆಗಳನ್ನು ಕರಗದ ಮೂಲಕ ನಗರದಲ್ಲಿ ಪ್ರದಕ್ಷಿಣೆ ಮಾಡಿ ಪೂಜೆ ಸಲ್ಲಿಸಲಾಗಿತ್ತು.

ಅಂದಿನಿಂದ ಇಂದಿನವರೆಗೂ ವರ್ಷಕ್ಕೆ ಒಂದು ಬಾರಿ ದಸರಾ ಸಂದರ್ಭ ಕರಗ ಉತ್ಸವ ನಡೆಸಲಾಗುತ್ತದೆ. ಮಡಿಕೇರಿಯ ಶಕ್ತಿದೇವತೆಗಳೆಂದು ಕರೆಸಿಕೊಳ್ಳುವ ಈ ನಾಲ್ಕು ದೇವತೆಗಳನ್ನು ಜನರು ಪೂಜಿಸುತ್ತಾರೆ. ನಗರದಲ್ಲಿ ಕರಗ ಸಂಚರಿಸುವ ವೇಳೆ ಪ್ರತಿ ಮನೆ ಮುಂದೆಯೂ ಬಣ್ಣ ಬಣ್ಣದ ರಂಗೋಲಿ ಬಿಡಿಸಿ ದೇವರನ್ನು ಸ್ವಾಗತಿಸಲಾಗುತ್ತದೆ.

ಇದನ್ನೂ ಓದಿ: ಮಡಿಕೇರಿ ದಸರಾದಲ್ಲಿ ಡಿಜೆ ಬಳಕೆಗೆ ಯಾವುದೇ ಸಮಸ್ಯೆ ಆಗಲ್ಲ: ಸಚಿವ ನಾಗೇಶ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.