ಕೊಡಗು: ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಮಡಿಕೇರಿ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.26 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಮೊಹಮದ್ ಅಸ್ಲಂ, ಬೋಪ್ಪಣ, ಅಕ್ಷೀತ್, ಸುಮಂತ್ ಮತ್ತು ರಾಜೇಶ್ ಎಂಬುವರು ಬಂಧಿತ ಆರೋಪಿಗಳಾಗಿದ್ದಾರೆ. ಮಡಿಕೇರಿಯ ಡಿಎಫ್ಒ ಬಂಗ್ಲೆ ಹತ್ತಿರ ಕುಳಿತು ಗಾಂಜಾ ಮಾರಾಟದಿಂದ ಬಂದ ಹಣದ ವಿಷಯವಾಗಿ ಆರೋಪಿಗಳ ನಡುವೆ ಗಲಾಟೆ ನಡೆಯುತ್ತಿತ್ತು. ಈ ಬಗ್ಗೆ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ವೇಳೆ ದಾಳಿ ನಡೆಸಿದ ಮಡಿಕೇರಿ ಪೊಲೀಸರು ಐವರನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಬಂಧಿತರಿಂದ 1,26,000 ಮೌಲ್ಯದ ಗಾಂಜಾ ಮತ್ತು 2 ಬೈಕ್ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.