ETV Bharat / state

ನಕಲಿ ಆಧಾರ್ ಕಾರ್ಡ್ ಬಳಸಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಗೆ ತರಾಟೆ

ಸುಬ್ರಹ್ಮಣ್ಯ ದೇವಾಲಯದ ವಾರ್ಷಿಕೋತ್ಸವದಲ್ಲಿ ಯುವಕನೊಬ್ಬ ನಕಲಿ ಐಡಿ ಕಾರ್ಡ್ ಬಳಸಿ ವ್ಯಾಪಾರ ನಡೆಸಲು ಬಂದು ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾದ ಘಟನೆ ನಡೆದಿದೆ.

Kodagu
ನಕಲಿ ಆಧಾರ್ ಕಾರ್ಡ್ ಬಳಸಿ ಅನ್ಯ ಧರ್ಮದ ವ್ಯಕ್ತಿ ವ್ಯಾಪಾರ
author img

By

Published : Nov 30, 2022, 12:44 PM IST

Updated : Nov 30, 2022, 1:11 PM IST

ಕೊಡಗು: ಒಂದು ಧರ್ಮದವರ ಸೋಗಿನಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಯನ್ನು ಹಿಂದೂಪರ ಸಂಘಟನೆಯ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಹರಿಹರ ಸುಬ್ರಹ್ಮಣ್ಯ ದೇವಾಲಯದಲ್ಲಿ ಈ ಘಟನೆ ನಡೆಯಿತು. ದೇವಾಲಯದ ಸುತ್ತಮುತ್ತ ಕೆಲಕಾಲ‌ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಅನ್ಯ ಧರ್ಮದ ವ್ಯಕ್ತಿಯಿಂದ ವ್ಯಾಪಾರ: ಹಿಂದೂ ಕಾರ್ಯಕರ್ತರಿಂದ ತರಾಟೆ

ಹರಿಹರ ಸುಬ್ರಹ್ಮಣ್ಯ ದೇವಾಲಯದಲ್ಲಿ ಷಷ್ಠಿ ಹಬ್ಬದ ಪ್ರಯುಕ್ತ ಜಾತ್ರೆ ನಡೆಯುತ್ತದೆ. ಈ ದೇವಾಲಯದ ಸುತ್ತಮುತ್ತಲಿನಲ್ಲಿ ಹಿಂದೂಗಳು ಮಾತ್ರ ವ್ಯಾಪಾರ ಮಾಡಬೇಕು ಎಂದು ಹಿಂದೂ ಪರ ಸಂಘಟನೆಗಳು ಎಚ್ಚರಿಕೆ ನೀಡಿದ್ದರು. ನಿನ್ನೆ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿ ವ್ಯಾಪಾರ ಮಾಡುತ್ತಿದ್ದ ‌ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಕೊಡಗು: ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ಕೊಡದಂತೆ ಹಿಂದೂ ಸಂಘಟನೆಗಳ ಕರೆ

Last Updated : Nov 30, 2022, 1:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.