ETV Bharat / state

ರೈತ ವಿರೋಧಿ ಕಾಯ್ದೆ ವಿರೋಧಿಸಲು ಕೊಡಗಿನಲ್ಲಿ ಹಲವು ಸಂಘಟನೆಗಳಿಂದ ಸಮಾಲೋಚನಾ ಸಭೆ

author img

By

Published : Sep 26, 2020, 3:36 PM IST

ಸೆಪ್ಟೆಂಬರ್ 28ರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಸಂಪಾಜೆ, ಕುಶಾಲನಗರ ಹಾಗೂ ಮಡಿಕೇರಿ ಪಟ್ಟಣದಲ್ಲಿ ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡುವುದು. ಕಾಯ್ದೆಗಳನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಷೋಷಣೆ ಕೂಗುವುದಕ್ಕೆ ಒಮ್ಮತದಿಂದ ನಿರ್ಧಾರ ಕೈಗೊಂಡರು..

Meeting by several organizations to oppose anti-farmer act
ಕೊಡಗು: ರೈತ ವಿರೋಧಿ ಕಾಯ್ದೆ ವಿರೋಧಿಸಲು ಹಲವು ಸಂಘಟನೆಗಳಿಂದ ಸಮಾಲೋಚನಾ ಸಭೆ

ಕೊಡಗು : ಭೂ ಸುಧಾರಣಾ ಹಾಗೂ ಎಪಿಎಂಸಿ ಕಾಯ್ದೆ ಸೇರಿ ಹಲವು ಕಾಯ್ದೆಗಳನ್ನು ವಿರೋಧಿಸಿ ರೈತ ಹಾಗೂ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ರಾಜ್ಯ ಬಂದ್‌ ಯಶಸ್ವಿಗೆ ಕೊಡಗಿನಲ್ಲಿ ಹಲವು ಸಂಘಟನೆಗಳು ಕೈ ಜೋಡಿಸಿವೆ.

ರೈತ ವಿರೋಧಿ ಕಾಯ್ದೆ ವಿರೋಧಿಸಲು ಹಲವು ಸಂಘಟನೆಗಳಿಂದ ಸಮಾಲೋಚನಾ ಸಭೆ

ನಗರದ ಗಾಂಧಿ ಮೈದಾನದಲ್ಲಿ ಸೇರಿದ ರೈತ ಸಂಘಟನೆ, ದಲಿತ ಸಂಘಟನೆ, ಎಸ್‌‌ಡಿಪಿಐ, ಭಾರತೀಯ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಕಾರ್ಮಿಕ ಸಂಘಟನೆ, ಕಮ್ಯುನಿಸ್ಟ್ ಹಾಗೂ ಮಾರ್ಕ್ಸ್‌ವಾದಿ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಜಿಲ್ಲಾ ಬಂದ್ ಬಗ್ಗೆ ಸಮಾಲೋಚನೆ ನಡೆಸಿದರು.

ಬಳಿಕ ಸೆಪ್ಟೆಂಬರ್ 28ರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಸಂಪಾಜೆ, ಕುಶಾಲನಗರ ಹಾಗೂ ಮಡಿಕೇರಿ ಪಟ್ಟಣದಲ್ಲಿ ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡುವುದು. ಕಾಯ್ದೆಗಳನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಷೋಷಣೆ ಕೂಗುವುದಕ್ಕೆ ಒಮ್ಮತದಿಂದ ನಿರ್ಧಾರ ಕೈಗೊಂಡರು.

ಕೇಂದ್ರ ಸರ್ಕಾರ ರೈತರು, ಕಾರ್ಮಿಕರು ಹಾಗೂ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆ ಜಾರಿಗೆ ತಂದಿರುವ ಕಾಯ್ದೆಗಳು ಮರಣ ಶಾಸನ ಬರೆದಂತಿವೆ. ಕಾಯ್ದೆಗಳನ್ನು ಜಾರಿಗೆ ತಂದು ಕೇಂದ್ರ ಸರ್ಕಾರ ಬಂಡವಾಳ ಶಾಹಿಗಳಿಗೆ ಮಣೆ ಹಾಕುತ್ತಿದೆ.

ಸ್ಥಳೀಯ ಶಾಸಕರು ಹಿಂದೆ ಭೂಮಿ ಮಾರಾಟ ಮಾಡಬೇಡಿ ಎನ್ನುತ್ತಿದ್ದರು ಇದೀಗ ಭೂಮಿ ಮಾರಾಟ ಮಾಡುವಂತೆ ಹೇಳುತ್ತಿದ್ದಾರೆ ಎಂದು ಆರೋಪಿಸಿದರು. ಬಳಿಕ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.