ಕೊಡಗು: ಜಿಲ್ಲೆಯಲ್ಲಿ ಮುಂಗಾರು ಸಂದರ್ಭದಲ್ಲಿ ಸಾಕಷ್ಟು ಅನಾಹುತ ಉಂಟಾಗುತ್ತದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕಿದೆ. ಆ ದಿಸೆಯಲ್ಲಿ ಭೂಕುಸಿತ ಸಂಭವಿಸಬಹುದಾದ ಪ್ರದೇಶಗಳಿಗೆ ಎನ್‍ಡಿಆರ್‍ಎಫ್ ತಂಡವನ್ನು ನಿಯೋಜನೆ ಮಾಡಬೇಕು. ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ಮಡಿಕೇರಿ ಸಮೀಪದ ಪ್ರಕೃತಿ ವಿಕೋಪದ ಎದುರಿಸುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಪ್ರಾಕೃತಿಕ ವಿಕೋಪ ಎದುರಿಸಲು ಸರ್ಕಾರ ಇನ್ನಷ್ಟು ಹೆಚ್ಚಿನ ಹಣ ಬಿಡುಗಡೆ ಮಾಡಲಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು. ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಆ ದಿಸೆಯಲ್ಲಿ ಜಿಲ್ಲಾಧಿಕಾರಿ ಅವರ ಖಾತೆಯಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವ ದಿಸೆಯಲ್ಲಿ 50 ಕೋಟಿ ರೂ. ಗೂ ಹೆಚ್ಚು ಹಣ ಇದೆ ಎಂದು ತಿಳಿಸಿದರು.
ಮುಂಗಾರು ಸಂದರ್ಭದಲ್ಲಿ ಭೂ ಕುಸಿತ ಹಾಗೂ ಪ್ರವಾಹ ಸಂಭವಿಸಬಹುದಾದ ಪ್ರದೇಶದ ಜನರನ್ನು ಶಾಲೆ, ಅಂಗನವಾಡಿ, ಕಲ್ಯಾಣ ಮಂಟಪ ಮತ್ತಿತರ ಕಡೆಗಳಲ್ಲಿ ಸ್ಥಳಾಂತರಿಸಬೇಕು. ಕಾಳಜಿ ಕೇಂದ್ರದಲ್ಲಿ ಶೌಚಾಲಯ, ಕುಡಿಯುವ ನೀರು, ಇತರ ಅಗತ್ಯ ಸೌಲಭ್ಯಗಳು ಇರಬೇಕು ಎಂದು ಸಚಿವರು ಸೂಚಿಸಿದರು.
ಇದನ್ನೂ ಓದಿ: ಹಂಪಿಯಲ್ಲಿದೆ 500 ವರ್ಷಗಳ ಹಿಂದಿನ ಮಾವಿನ ತೋಪು: 21 ಮರಗಳ ಪೈಕಿ ಈಗಿರುವುದು ಕೇವಲ 7!