ಕೊಡಗು : ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಪ್ಪಚ್ಚು ರಂಜನ್, ಕೋವಿಡ್ ಸೋಂಕಿತರ ಆರೈಕೆ ಕುರಿತು ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ನಿರ್ಧಾರ ಮಾಡಿದಂತೆ ಸೋಂಕಿತರ ಆರೈಕೆಗೆ ಹೆಚ್ಚಿನ ಗಮನ ನೀಡಲಾಗಿದ್ದು, ನಾಲ್ಕು ರೋಗಿಗಳಿಗೆ ಓರ್ವ ನರ್ಸ್ ನಿಯೋಜಿಸಲಾಗಿದೆ. ವೈದ್ಯರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಸ್ಪತ್ರೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕೂಡ ನೀಡಲಾಗುತ್ತಿದೆ. ಮಾತೆ ಕಾವೇರಮ್ಮ, ಇಗ್ಗುತಪ್ಪ ದೇವರ ಅನುಗ್ರಹದಿಂದ ಜಿಲ್ಲೆ ಸೋಂಕು ಮುಕ್ತವಾಗಲಿದೆ ಎಂದರು.
ಕೋವಿಡ್ ಕೇರ್ ಸೆಂಟರ್ಗೆ ಜಿಲ್ಲಾಧಿಕಾರಿ ಭೇಟಿ: ರೋಗಿಗಳಿಗೆ ಸರಿಯಾಗಿ ಊಟ ತಿಂಡಿ ಕೊಡುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಜಿಲ್ಲಾಧಿಕಾರಿ ಚಾರುಲತ, ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಿಪಿಇ ಕಿಟ್ ಧರಿಸಿ ಕೋವಿಡ್ ವಾರ್ಡ್ಗೆ ತೆರಳಿ ಸೋಂಕಿತರನ್ನು ಮಾತನಾಡಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯನ್ನು ಜೊತೆಗೆ ಕರೆದುಕೊಂಡು ಹೋಗಿ ಸಮಸ್ಯೆಗಳನ್ನು ಬಗೆಹರಿಸುವಂತೆ ಮತ್ತು ರೋಗಿಗಳ ಜೊತೆ ಸಿಬ್ಬಂದಿ ಸರಿಯಾಗಿ ವರ್ತಿಸುವಂತೆ ಸೂಚನೆ ನೀಡಿದರು.