ETV Bharat / state

ಯೋಗೇಶ್ವರ್​​​​​​ ಹೊಂದಾಣಿಕೆ ಬಗ್ಗೆ ಅವರನ್ನೇ ಕೇಳಬೇಕು: ಶಾಸಕ ಅಪ್ಪಚ್ಚು ರಂಜನ್ - ಬಿಜೆಪಿ ಮುಂಖಡ ಸಿ.ಪಿ‌.ಯೋಗೇಶ್ವರ್

ಸಿ.ಪಿ‌.ಯೋಗೇಶ್ವರ್ ಯಾರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎನ್ನುವುದನ್ನು ನೀವು ಅವರನ್ನೇ ಕೇಳಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಪ್ರತಿಕ್ರಿಯಿಸಿದ್ದಾರೆ.

appacchu ranjan
appacchu ranjan
author img

By

Published : Jul 31, 2020, 11:23 AM IST

ಕುಶಾಲನಗರ (ಕೊಡಗು): ಬಿಜೆಪಿ ಮುಂಖಡ ಸಿ.ಪಿ‌.ಯೋಗೇಶ್ವರ್ ಯಾರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎನ್ನುವುದನ್ನು ನೀವು ಅವರನ್ನೇ ಕೇಳಬೇಕು ಎಂದು ಯೋಗೇಶ್ವರ್ ಮಾಡಿರುವ ರಾಜಕೀಯ ಹೊಂದಾಣಿಕೆ ಆರೋಪಕ್ಕೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಪ್ರತಿಕ್ರಿಯಿಸಿದ್ದಾರೆ.

ಶಾಸಕ ಅಪ್ಪಚ್ಚು ರಂಜನ್

ಹಗಲಿನಲ್ಲಿ ಮಾತ್ರ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ‌ ಮಾಡುತ್ತಾರೆ. ರಾತ್ರಿಯಾದರೆ ನಮ್ಮ ಸಿಎಂ ಬಳಿ ಕೆಲಸ ಮಾಡಿಸಿಕೊಳ್ತಾರೆ ಎನ್ನುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಆರೋಪಕ್ಕೆ, ಇದರ ಬಗ್ಗೆ ನನಗೇನು ಗೊತ್ತಿಲ್ಲ. ಯೋಗೇಶ್ವರ್ ಯಾರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ, ಹೇಗೆ ಮಾಡಿಕೊಂಡಿದ್ದಾರೆ, ಡಿಕೆಶಿ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಇಬ್ಬರೂ ನಮ್ಮ ಸಿಎಂ ಜೊತೆ ರಾಜಕೀಯ ಹೋಂದಾಣಿಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಆರೋಪಕ್ಕೆ ಹಾಸ್ಯವಾಗಿಯೇ ಪ್ರತಿಕ್ರಿಯಿಸಿದರು.

ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ನಾನೂ ಒಬ್ಬ.‌ ಇದರಲ್ಲಿ ಅನುಮಾನವೇ ಇಲ್ಲ. ಕಾದು ನೋಡುತ್ತೇವೆ. ಯಾರನ್ನು ಸಚಿವರನ್ನಾಗಿ ನೇಮಿಸಬೇಕು ಎನ್ನುವ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಚಿವ ಸಂಪುಟದಲ್ಲಿ ನೀವೂ ಆಕಾಂಕ್ಷಿಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದರು.‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.