ETV Bharat / state

ಕಾವೇರಿ ನದಿ ಇಕ್ಕೆಲೆಗಳಲ್ಲಿ ಹೂಳೆತ್ತುವ ಕಾಮಗಾರಿಗೆ ಶಾಸಕ ಅಪ್ಪಚ್ಚು ರಂಜನ್ ಚಾಲನೆ

ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ನದಿ ತಟದ ಬಡಾವಣೆಗಳಲ್ಲಿ ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ ಕಾವೇರಿ ನದಿಯಲ್ಲಿ ಹೂಳೆತ್ತುವ ಕಾಮಗಾರಿಗೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಚಾಲನೆ ನೀಡಿದರು.

MLA appachu Ranjan drive to Cauvery River dredging works
ಕಾವೇರಿ ನದಿ ಇಕ್ಕೆಲಗಳಲ್ಲಿ ಹೂಳೆತ್ತುವ ಕಾಮಗಾರಿಗೆ ಶಾಸಕ ಅಪ್ಪಚ್ಚು ರಂಜನ್ ಚಾಲನೆ..!
author img

By

Published : May 11, 2020, 5:08 PM IST

Updated : May 11, 2020, 5:25 PM IST

ಕುಶಾಲನಗರ/ಕೊಡಗು: ಕಾವೇರಿ ಸೇತುವೆ ಕೆಳ ಭಾಗದಲ್ಲಿ ಗಣಪತಿ ಪೂಜೆ ಸಲ್ಲಿಸಿದ ಬಳಿಕ ಜೆಸಿಬಿಯಲ್ಲಿ ಕುಳಿತ ಶಾಸಕ ರಂಜನ್, ಹೂಳೆತ್ತುವ ಕೆಲಸಕ್ಕೆ ಸಾಂಕೇತಿಕವಾಗಿ ಆರಂಭ ಕೊಟ್ಟರು.

ಕಾವೇರಿ ನದಿ ಇಕ್ಕೆಲೆಗಳಲ್ಲಿ ಹೂಳೆತ್ತುವ ಕಾಮಗಾರಿಗೆ ಶಾಸಕ ಅಪ್ಪಚ್ಚು ರಂಜನ್ ಚಾಲನೆ

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, 85 ಲಕ್ಷ ರೂ. ವೆಚ್ಚದಲ್ಲಿ ಕುಶಾಲನಗರ ವ್ಯಾಪ್ತಿಯಲ್ಲಿ ಕಾವೇರಿ ನದಿ ದಂಡೆಯ ಹೂಳೆತ್ತುವ ಕೆಲಸ ಆರಂಭವಾಗಿದೆ. ಸಣ್ಣ ಮಟ್ಟದಲ್ಲಿ ಕುಶಾಲನಗರ ವ್ಯಾಪ್ತಿಯಲ್ಲಿ ನದಿ ಹೂಳೆತ್ತಲು ಅವಕಾಶ ನೀಡಲಾಗಿದೆ. ಈ ಕೆಲಸಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಅವಧಿಯಲ್ಲೇ 75 ಕೋಟಿ ರೂ ಮೀಸಲಿಡಲಾಗಿತ್ತು. ಅಂದಾಜು ಪಟ್ಟಿ ತಯಾರಿಸಿದಾಗ 130 ಕೋಟಿ ರೂ ಯಷ್ಟು ಹಣದ ಅಗತ್ಯವಿತ್ತು ಎಂದರು.‌

ಕೇವಲ ಕುಶಾಲನಗರ ಮಾತ್ರವಲ್ಲ. ಹಟ್ಟಿ ಹೊಳೆ, ಮುಕ್ಕೋಡ್ಲು, ಮಾದಾಪುರ, ಹಮ್ಮಿಯಾಲ ಭಾಗದಲ್ಲಿ ಹೊಳೆಯಲ್ಲಿ ಹೂಳು ತುಂಬಿದೆ. ಪರಿಣಾಮ‌ ಹೊಳೆ ನೀರು ದಿಕ್ಕು ಬದಲಿಸಿ ಎಲ್ಲೆಲ್ಲೂ ಹರಿಯುತ್ತಿದೆ. ಕಳೆದ ಎರಡು ವರ್ಷಗಳಿಂದ ಸಂಭವಿಸಿದ ಪ್ರವಾಹದಲ್ಲಿ ಜಿಲ್ಲೆ ಸಾಕಷ್ಟು ಸಾವು-ನೋವುಗಳನ್ನು ಅನುಭವಿಸಬೇಕಾಯಿತು.

ಪ್ರವಾಹದಿಂದ ಕುಶಾಲನಗರ ಮುಳುಗಬೇಕಾದ ಪರಿಸ್ಥಿತಿ ನೋಡಬೇಕಾಯಿತು. ಪ್ರವಾಹ ತಡೆಗಟ್ಟುವ ಉದ್ದೇಶದಿಂದ ಸೇವಾ ಭಾವನೆಯಿಂದ ಹೂಳು ತೆಗೆಯುವಂತೆ ಗುತ್ತಿಗೆದಾರರಿಗೆ ಹೇಳಿದ್ದೇನೆ. ಅದರಲ್ಲಿ ಯಾವುದೇ ಲೋಪಗಳು ಆಗದಂತೆ ಆಗಾಗ್ಗೆ ಪರಿಶೀಲನೆ ‌ನಡೆಸುತ್ತೇನೆ ಎಂದು ಭರವಸೆ ನೀಡಿದರು.

Last Updated : May 11, 2020, 5:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.