ಕೊಡಗು : ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಕೆ ಜಿ ಬೋಪಯ್ಯ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ. ಮಡಿಕೇರಿಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಿದ ಬೋಪಯ್ಯ ಮುಂಜಾಗ್ರತಾ ಕ್ರಮವಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.
ಕೇರಳ-ಕೊಡಗು ಗಡಿಭಾಗದಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಆ ಭಾಗದಲ್ಲಿ ರೈತರಲ್ಲದವರು ಸುಮ್ಮನೆ ತಿರುಗಾಡುತ್ತಿರುವುದು ಗಮನಕ್ಕೆ ಬಂದಿದೆ. ಅಂತವರ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಆರೋಗ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಆಟೋ ಬಾಡಿಗೆಗೆ ಓಡಿಸುತ್ತಿದ್ದ ಕುಟುಂಬಗಳು ಸಮಸ್ಯೆಯಲ್ಲಿವೆ. ಅಂತಹ ಕುಟುಂಬಗಳಿಗೆ ಆಹಾರ ಪೂರೈಸಬೇಕು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.