ETV Bharat / state

ಕೋವಿಡ್‌ನಿಂದಾದ ಸಾವು-ನೋವಿಗೆ ಬಿಜೆಪಿ ಸರ್ಕಾರವೇ ನೇರ ಹೊಣೆ : ನಲಪಾಡ್

author img

By

Published : May 13, 2022, 7:51 PM IST

ಮಡಿಕೇರಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ..

Mohammed Harris Nalapad outrage on bjp govt
ಬಿಜೆಪಿ ಸರ್ಕಾರದ ವಿರುದ್ಧ ನಲಪಾಡ್ ವಾಗ್ದಾಳಿ

ಮಡಿಕೇರಿ, ಕೊಡಗು : ಕೋವಿಡ್‌ನಿಂದಾಗಿ ಆದ ಸಾವು ನೋವಿಗೆ ಬಿಜೆಪಿ ಸರ್ಕಾರವೇ ನೇರ ಹೊಣೆ. ಕೊರೊನಾ ಸಂಕಷ್ಟ ಕಾಲದಲ್ಲಿ ಸರ್ಕಾರ ಭ್ರಷ್ಟಾಚಾರವೆಸಗಿದೆ. ಸಾವಿನ ಸಂಖ್ಯೆಯನ್ನು ಸರ್ಕಾರ ಮುಚ್ಚಿಡುತ್ತಿದೆ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಆರೋಪಿಸಿದರು.

ಬಿಜೆಪಿ ಸರ್ಕಾರದ ವಿರುದ್ಧ ನಲಪಾಡ್ ವಾಗ್ದಾಳಿ

ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಹಾರ ನೀಡಬೇಕೆಂಬ ಕಾರಣಕ್ಕೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆಯನ್ನು ಕಡಿಮೆ ತೋರಿಸಿದ್ದಾರೆ. 47 ಲಕ್ಷ ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ವಿಶ್ವಸಂಸ್ಥೆಯ ವರದಿಗೂ ಸರ್ಕಾರದ ವರದಿಗೂ ವ್ಯತ್ಯಾಸವಿದೆ.

ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೇ ನೇರ ಹೊಣೆಯಾಗಿದ್ದಾರೆ. ಕೊಡಗಿನ ಶಾಸಕರು ಕೂಡ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಕೋವಿಡ್‌ನಿಂದ ಮೃತಪಟ್ಟವರಿಗೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ. ಇದೊಂದು ಭ್ರಷ್ಟಾಚಾರ ಸರ್ಕಾರವೆಂದು ಆರೋಪಿಸಿದರು.

ಇದನ್ನೂ ಓದಿ: ಕಾಳಿ ಸ್ವಾಮೀಜಿಗೆ ಮಸಿ ಬಳಿದಿದ್ದು ಅಕ್ಷಮ್ಯ ಅಪರಾಧ : ಮುತಾಲಿಕ್ ಖಂಡನೆ

ಉದ್ಯೋಗ ಸಿಗದೆ ಯುವ ಜನತೆ ಸಾವಿಗೆ ಶರಣಾಗುತ್ತಿದ್ದಾರೆ. ಉಡುಪಿಯಲ್ಲಿ ಎಂಬಿಎ ವಿದ್ಯಾರ್ಥಿನಿ ಕೆಲಸ ಸಿಗದೆ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು. ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಲಾಗುತ್ತಿದೆ. ಕಾರ್ಯಕರ್ತರ ಹಿಂದೆ ನಾನಿದ್ದೇನೆ. ಕಾರ್ಯಕರ್ತರು ಇಂತಹ ಬೆದರಿಕೆಗೆ ಬಗ್ಗಲ್ಲ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.