ಕೊಡಗು: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ಕರೆದೊಯ್ಯುವ ವೇಳೆ ಆಕೆ ಮಾರ್ಗ ಮಧ್ಯೆ ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಕುಶಾಲನಗರ ಸಮೀಪದ ಆನೆಕಾಡು ಬಳಿ ತಡರಾತ್ರಿ ಘಟನೆ ಸಂಭವಿಸಿದ್ದು, ತಾಯಿ ಹಾಗೂ ಹೆಣ್ಣು ಮಗು ಆರೋಗ್ಯವಾಗಿದ್ದಾರೆ.
ತುಮಕೂರಿನ ಪಾವಗಡ ಮೂಲದ ದಂಪತಿ ಕೆಲಸ ಅರಸಿ ಬಂದ್ದಿದ್ದರು. ತಡರಾತ್ರಿ ಮಹಿಳೆಗೆ ಹೆರಿಗೆ ನೋವಿನ ಕಾರಣ ಮಡಿಕೇರಿಯ ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್ ಬಳಸಲಾಗಿತ್ತು.