ETV Bharat / state

ರಾಗಿಣಿ ಬಿಜೆಪಿ ಪರ ಪ್ರಚಾರ ಮಾಡಿದ್ದ ಮಾತ್ರಕ್ಕೆ ರಾಜಕೀಯ ಬಣ್ಣ ಸಲ್ಲದು: ಪ್ರತಾಪ್ ಸಿಂಹ - ಕೊಡಗು ಸುದ್ದಿ

ಕೆ.ಆರ್. ಪೇಟೆಯಲ್ಲಿ ಚುನಾವಣೆ ಸಂದರ್ಭ ನಟಿ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದರು. ಅದಕ್ಕೂ ಹಿಂದೆ ರಾಗಿಣಿ ಕಾಂಗ್ರೆಸ್ ಮತ್ತು ಜೆಡಿಎಸ್ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದರು ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದ್ದಾರೆ.

ಸಂಸದ ಪ್ರತಾಪ್ ಸಿಂಹ
ಸಂಸದ ಪ್ರತಾಪ್ ಸಿಂಹ
author img

By

Published : Sep 9, 2020, 1:05 PM IST

ಕೊಡಗು: ಡ್ರಗ್ಸ್ ದಂಧೆ ವಿಚಾರದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ.

ಡ್ರಗ್ಸ್ ದಂಧೆ ವಿಚಾರ ಕುರಿತು ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ

ಜಿಲ್ಲೆಯ ಬಲಮುರಿಯಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಕೆ.ಆರ್. ಪೇಟೆಯಲ್ಲಿ ಚುನಾವಣೆ ಸಂದರ್ಭ ನಟಿ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದರು. ಅದಕ್ಕೂ ಹಿಂದೆ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದಾರೆ. ಈಗಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರ ಜೊತೆ ರಾಗಿಣಿ ಇರುವ ಫೋಟೋಗಳು ವೈರಲ್​ ಆಗ್ತಿವೆ. ಹಾಗೆಂದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ ಎಂದರು.

ಡ್ರಗ್ಸ್ ಎನ್ನೋದು ಸಾಮಾಜಿಕ ಪಿಡುಗಾಗಿ ಕಾಡುತ್ತಿದೆ. ಈಗ ನಾವೆಲ್ಲರೂ ಪಕ್ಷಭೇದ ಮರೆತು ಡ್ರಗ್ಸ್ ಮಾರಾಟ ಮತ್ತು ಸೇವನೆ ವಿರುದ್ಧ ಹೋರಾಡಬೇಕಾಗಿದೆ. ಈಗಾಗಲೇ ನಮ್ಮ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಡ್ರಗ್ಸ್ ಮಾರಾಟ ಮತ್ತು ಸೇವನೆ ವಿರುದ್ಧ ಹೋರಾಡಿ, ಜನರನ್ನು ಎಚ್ಚರಗೊಳಿಸಲು ಟ್ವಿಟರ್ ನಲ್ಲಿ ಅಭಿಯಾನ ಆರಂಭಿಸಿದ್ದಾರೆ. ಪಕ್ಷ ಅದಕ್ಕಾಗಿ ಕೆಲಸ ಮಾಡಲಿದೆ ಎಂದರು. ಯಾವುದೇ ಪಕ್ಷದ ನಾಯಕರು ಅಥವಾ ಯಾರೇ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರು ನಿರ್ದಾಕ್ಷಿಣ್ಯ ಕ್ರಮ ಆಗಲಿದೆ ಎಂದು ಸಂಸದ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.