ಕೊಡಗು: ಬಜ್ಜಿ ತೆಗೆದುಕೊಳ್ಳುವಾಗ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೊಪ್ಪ ಗ್ರಾಮದಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ನಿವಾಸಿ ಮಹದೇವ ನಾಯಕ ಕೊಲೆಗೀಡಾದ ವ್ಯಕ್ತಿ.

ಮದ್ಯ ಸೇವಿಸಿ ಬಾರ್ ಮುಂದಿನ ಬಜ್ಜಿ ಅಂಗಡಿಯ ಮಹಿಳೆ ಜೊತೆ ಈತ ಜಗಳವಾಡಿದ್ದು, ಇದೇ ವೇಳೆ ಅಲ್ಲಿಗೆ ಬಂದ ಇಬ್ಬರು ಯುವಕರು ಏಕಾಏಕಿ ಮಹದೇವ ನಾಯಕ್‌ಗೆ ಥಳಿಸಿದ್ದಾರೆ ಎನ್ನಲಾಗಿದೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಹದೇವ ನಾಯಕ್‌ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಆರೋಪಿಗಳಾದ ಶಿವಕುಮಾರ್ ಹಾಗೂ ಸಂತೋಷ್ ಎಂಬಿಬ್ಬರು ಯುವಕರನ್ನು ಬೈಲುಕುಪ್ಪೆ ಪೊಲೀಸರು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.