ಕೊಡಗು: ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಗುಂಡೇಟಿಗೆ ಇಬ್ಬರು ಬಲಿಯಾದ ಪರಿಣಾಮ ಮಡಿಕೇರಿ ನಗರದಲ್ಲಿ ಇಂದು ಸ್ವಯಂಪ್ರೇರಿತ ಬಂದ್ ಆಚರಿಸಲಾಗುತ್ತಿದೆ.
ಪೊಲೀಸರ ಗೋಲಿಬಾರ್ ಖಂಡಿಸಿ ಮುಸ್ಲಿಂ ವ್ಯಾಪಾರಸ್ಥರು ತಮ್ಮ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಬಂದ್ ನಡೆಸುತ್ತಿದ್ದಾರೆ. ಬೆಳಿಗ್ಗೆಯಿಂದ ಸಂಜೆಯವರೆಗೂ ಮಾರ್ಕೆಟ್, ಮಹದೇವ ಪೇಟೆ, ಇಂದಿರಾಗಾಂಧಿ ಸರ್ಕಲ್ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ರಸ್ತೆಗಳಲ್ಲಿ ಸಾರ್ವಜನಿಕರ ಓಡಾಟ ಕಡಿಮೆಯಾಗಿತ್ತು.